ಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ

ಬೆಂಗಳೂರು, ಜು. ೧: ಹಲವು ಜಿಲ್ಲೆಗಳ ಕೋರ್ಟ್ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಚಿಕ್ಕೋಡಿಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ರೂ. ೩೨ ಕೋಟಿ, ಮೂಡಿಗೆರೆಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ರೂ. ೧೧ ಕೋಟಿ, ಕೋಲಾರದಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ರೂ. ೨೫ ಕೋಟಿ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು. ಶ್ರೀನಿವಾಸಪುರದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ರೂ. ೧೫ ಕೋಟಿ, ರಾಯಚೂರು ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ರೂ. ೨೭ ಕೋಟಿ ಹಾಗೂ ದಾವಣಗೆರೆ ಜಿಲ್ಲೆ ಕುಂದವಾಡದಲ್ಲಿನ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ರೂ. ೨೨ ಕೋಟಿ ರೂಪಾಯಿ, ಬಳ್ಳಾರಿಯ ಪಾರ್ವತಿ ನಗರದಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ರೂ. ೧೨೧ ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಬೆಂಗಳೂರು ನಗರದ ಎಲ್ಲಾ ವಾರ್ಡ್ಗಳಲ್ಲಿ ರೂ. ೧೦೩ ಕೋಟಿ ವೆಚ್ಚದಲ್ಲಿ ನಮ್ಮ ಕ್ಲಿನಿಕ್ ಆರಂಭಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ೪೩೮ ಹುದ್ದೆಗಳನ್ನು ಸೃಷ್ಟಿಸಿ ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗ ಹತೋಟಿಗೆ ತರಲು ಸಾಧ್ಯ, ಸರ್ಕಾರಿ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯ ಅಥಣಿ- ನಿಪ್ಪಾಣಿ ರಸ್ತೆಯನ್ನು ರೂ. ೩೨ ಕೋಟಿ ವೆಚ್ಚದಲ್ಲಿ ಅಗಲೀಕರಣ ಮಾಡಲಾಗುವುದು, ಹಟ್ಟಿ ಚಿನ್ನದ ಗಣಿಯ ಒಂದು ಭಾಗದಲ್ಲಿ ರಂಧ್ರ ಕಾಣಿಸಿಕೊಂಡಿದ್ದು, ಅಲ್ಲಿಗೆ ತಲುಪುವ ವ್ಯವಸ್ಥೆಗಾಗಿ ರೂ. ೩೦೦ ಕೋಟಿ ವೆಚ್ಚ ಮಾಡಲಾಗುತ್ತಿದೆ. ಒಬಿಸಿ ಮೀಸಲಾತಿಗಾಗಿ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಮೆಟ್ರೋ ಶೆಡ್ ಸ್ಥಳ ಬದಲಾವಣೆ ಬೇಡ: ಉದ್ಧವ್ ಠಾಕ್ರೆ

ಮುಂಬೈ, ಜು. ೧: ತಮ್ಮ ಸರ್ಕಾರ ಕೈಗೊಂಡಿದ್ದ ಮೆಟ್ರೋ ಶೆಡ್ ಸ್ಥಳ ತೀರ್ಮಾನ ಬದಲಾವಣೆ ಬೇಡ ಎಂದು ಮಹಾರಾಷ್ಟç ಮಾಜಿ ಸಿಎಂ ಉದ್ಧವ್ ಠಾಕ್ರೆ ನೂತನ ಶಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮುಂಬೈನ ವಿವಾದಿತ ಮೆಟ್ರೋ ಕಾರ್ ಶೆಡ್ ಯೋಜನೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರದ ತೀರ್ಮಾನವನ್ನು ಬದಲಾಯಿಸಲು ಸಿಎಂ ಶಿಂಧೆ ಮುಂದಾಗಿದ್ದು, ೨೦೧೯ ರಲ್ಲಿ ದೇವೇಂದ್ರ ಫಡ್ನವಿಸ್ ಸರ್ಕಾರದ ಅಡಿಯಲ್ಲಿ ಯೋಜಿಸಿದಂತೆ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ನಿರ್ಮಿಸಲಾಗುವುದು ಎಂದು ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಶಿಂಧೆ ಅವರು ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಇದೇ ವಿಚಾರವಾಗಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ನೂತನ ಸರ್ಕಾರಕ್ಕೆ ಮಾಜಿ ಸಿಎಂ ಉದ್ದವ್ ಠಾಕ್ರೆ ಮನವಿ ಮಾಡಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ ಅವರು, 'ನಿನ್ನೆ ನಡೆದ ಘಟನೆಯ ಬಗ್ಗೆ, ನಾನು ಅಮಿತ್ ಶಾ ಅವರಿಗೆ ೨.೫ ವರ್ಷಗಳ ಕಾಲ (ಶಿವಸೇನೆ-ಬಿಜೆಪಿ ಮೈತ್ರಿಯ ಸಮಯದಲ್ಲಿ) ಶಿವಸೇನೆ ಸಿಎಂ ಆಗಿರಬೇಕು ಎಂದು ಹೇಳಿದ್ದೆ, ಅವರು ಇದನ್ನು ಮೊದಲೇ ಮಾಡಿದ್ದರೆ, ಮಹಾರಾಷ್ಟçದಲ್ಲಿ ಮಹಾ ವಿಕಾಸ್ ಅಘಾಡಿ ಅಸ್ತಿತ್ವಕ್ಕೇ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನೂಪುರ್ ಶರ್ಮ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮAಡಲ

ದೆಹಲಿ, ಜು. ೧: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರವಾದಿ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ. ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದಯ್‌ಪುರದಲ್ಲಿ ಟೈಲರ್‌ನ ಹತ್ಯೆಯಾದ ದುರದೃಷ್ಟಕರ ಘಟನೆಗೆ ಆಕೆಯ ಮೇಲಿನ ಆಕ್ರೋಶವೇ ಕಾರಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನೂಪುರ್ ಶರ್ಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸುಪ್ರೀಂ ಕೋರ್ಟ್, ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ರಾಷ್ಟçದ ಭದ್ರತೆಗೆ ಬೆದರಿಕೆ ಹಾಕಿರುವುದನ್ನು ಗಮನಿಸಿ ಇಡೀ ದೇಶದ ಕ್ಷಮೆಯಾಚಿಸುವಂತೆ ಸೂಚಿಸಿದೆ. ಆಕೆ ವಕೀಲೆ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ತಪರಾಕಿ ಹಾಕಿದೆ. ಆಕೆಯ ಹೇಳಿಕೆ ಹೇಗೆ ಪ್ರಚೋದನೆ ನೀಡಿತು ಎಂಬುದನ್ನು ನಾವು ನೋಡಿದ್ದೇವೆ, ಉದಯಪುರದಲ್ಲಿ ಟೈಲರ್ ಕೊಲೆಯಾದ ದುರದೃಷ್ಟಕರ ಘಟನೆಗೆ ಆಕೆ ಏಕಾಏಕಿ ಕಾರಣವಾಗಿದ್ದಾರೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಶರ್ಮಾ ಹೇಳಿಕೆಗಳು ಆಕೆಯ ಸೊಕ್ಕು ಮತ್ತು ಹಠಮಾರಿತನವನ್ನು ತೋರಿಸುತ್ತದೆ, ಆಕೆ ಪಕ್ಷದ ವಕ್ತಾರರಾಗಿರಬಹುದು, ಆದರೆ ಈ ನೆಲದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಕಿಡಿ ಕಾರಿದೆ. ನೂಪುರ್ ಶರ್ಮಾ ಹೈಕೋರ್ಟ್ಗೆ ಹೋಗಿ ಅರ್ಜಿ ಸಲ್ಲಿಸಲಿ ಎಂದು ನೂಪುರ್ ಶರ್ಮಾ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನೂಪುರ ಶರ್ಮಾಗೆ ದೆಹಲಿ ಪೊಲೀಸರು ರೆಡ್ ಕಾರ್ಪೆಟ್ ಸ್ವಾಗತ ಕೋರಿರಬೇಕು. ಇಷ್ಟೊಂದು ಎಫ್.ಐ.ಆರ್. ದಾಖಲಾದರೂ ದೆಹಲಿ ಪೊಲೀಸ್ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ತಮ್ಮ ವಿರುದ್ಧದ ಎಲ್ಲ ಕೇಸ್‌ಗಳನ್ನು ದೆಹಲಿಗೆ ವರ್ಗಾವಣೆ ಮಾಡಬೇಕೆಂದು ನೂಪುರ್ ಶರ್ಮಾ ಕೋರಿದ್ದರು. ಇದೀಗ ನೂಪುರ್ ಶರ್ಮಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ತಾ. ೪ರಂದು ಏಕನಾಥ್ ಶಿಂಧೆ ಸರ್ಕಾರ ವಿಶ್ವಾಸಮತ ಯಾಚನೆ

ಮುಂಬೈ, ಜು. ೧: ಮಹಾರಾಷ್ಟçದಲ್ಲಿನ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ-ಭಾರತೀಯ ಜನತಾ ಪಾರ್ಟಿ ನೂತನ ಸರ್ಕಾರ ತಾ. ೪ ರಂದು ವಿಶ್ವಾಸಮತ ಯಾಚಿಸಲಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಬಿಜೆಪಿ ಶಾಸಕ ರಾಹುಲ್ ನರ್ವೇಕರ್ ವಿಧಾನಸಭಾ ಸ್ಪೀಕರ್ ಸ್ಥಾನಕ್ಕಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಒಂದು ವೇಳೆ ಈ ಸ್ಥಾನಕ್ಕೆ ಚುನಾವಣೆ ಅಗತ್ಯವಾದರೆ ಎರಡು ದಿನಗಳ ವಿಶೇಷ ಅಧಿವೇಶನ ಆರಂಭ ವಾಗುವ ತಾ. ೩ ರಂದು ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿ ದ್ದಾರೆ. ಕಾಂಗ್ರೆಸ್ ಪಕ್ಷದ ನಾನಾ ಪಟೋಲೆ ಕಳೆದ ವರ್ಷ ಫೆಬ್ರವರಿ ತಿಂಗ ಳಲ್ಲಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿAದಲೂ ಆ ಸ್ಥಾನ ತೆರವಾಗಿದೆ. ತಾ. ೪ ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ವಿಧಾನ ಭವನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಎಟಿಆರ್‌ನಿಂದ ಹೊಸ ಯುಎವಿ ಯಶಸ್ವೀ ಪರೀಕ್ಷೆ ನಡೆಸಿದ ಡಿಆರ್‌ಡಿಓ

ಚಿತ್ರದುರ್ಗ, ಜು. ೧: ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಚಿತ್ರದುರ್ಗದ ಎಟಿಆರ್(ಏರೋನಾಟಿಕಲ್ ಟೆಸ್ಟ್ ರೇಂಜ್)ನಿAದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ. ತಾ. ೧ ರಂದು ಅಟಾನಮಸ್ ಫ್ಲೈಯಿಂಗ್ ವಿಂಗ್‌ನ ಮೊದಲ ಹಾರಾಟವನ್ನು ನಡೆಸಲಾಗಿದ್ದು, ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿAದ ಯಶಸ್ವಿಯಾಗಿ ಚಾಲಕ ರಹಿತ ವಿಮಾನವನ್ನು ಹಾರಾಟ ನಡೆಸಲಾಗಿದೆ. ಈ ಚಾಲಕ ರಹಿತ ವಿಮಾನವು ಸಂಪೂರ್ಣ ಸ್ವಾಯತ್ತ ಮೋಡ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ವಿಮಾನವು ಟೇಕ್-ಆಫ್, ವೇ ಪಾಯಿಂಟ್, ನ್ಯಾವಿಗೇಷನ್ ಮತ್ತು ಟಚ್‌ಡೌನ್ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಪರಿಪೂರ್ಣ ಹಾರಾಟವನ್ನು ಯಶಸ್ವಿಯಾಗಿದೆ ಪ್ರದರ್ಶಿಸಿದೆ ಎಂದು ಡಿಆರ್‌ಡಿಓ ಹೇಳಿದೆ. ಈ ವಿಮಾನವು ಸ್ವಾವಲಂಬನೆಯ ಕಡೆಗೆ ತಂತ್ರಜ್ಞಾನಗಳನ್ನು ಸಾಬೀತು ಪಡಿಸುವ ವಿಷಯದಲ್ಲಿ ಪ್ರಮುಖ ಮೈಲಿಗಲ್ಲಾಗಿದ್ದು, ಭವಿಷ್ಯದ ಮಾನವರಹಿತ ವಿಮಾನಗಳ ಅಭಿವೃದ್ಧಿಗೆ ನಿರ್ಣಾಯಕ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಈ ಹಾರಾಟವು ಪ್ರಮುಖ ಮೈಲಿಗಲ್ಲಾಗಿದ್ದು, ಅಂತಹ ಕಾರ್ಯ ತಂತ್ರದ ರಕ್ಷಣಾ ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯಾಗಿದೆ. ನಿರ್ಣಾಯಕ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನದಲ್ಲಿ ಮಾನವರಹಿತ ವೈಮಾನಿಕ ವಾಹನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಡಿಆರ್‌ಡಿಓ ಹೇಳಿದೆ.