ಮಡಿಕೇರಿ, ಜು. ೧: ಕೊಡವ ಜನಾಂಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಂಘಟನೆ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಸಂಘಟನೆ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನ ಸೇರಿದಂತೆ ಸಂಘಟನೆ ಮುಂದಿರಿಸಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು. ಬಳಿಕ ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರ ಮೂಲಕ ಸರಕಾರದ ಸಂಬAಧಿಸಿದ ಪ್ರಮುಖರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರುಗಳಾದ ಕಲಿಯಂಡ ಪ್ರಕಾಶ್, ಪುಲ್ಲೆರ ಕಾಳಪ್ಪ, ಬಿ.ಎಂ. ಪಾರ್ವತಿ, ಬಾಚರಣಿಯಂಡ ಚಿಪ್ಪಣ್ಣ, ಚೆಂಬಾAಡ ಜನತ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.