ಮಡಿಕೇರಿ, ಜು. ೧: ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆಯು ಫುಟ್ಬಾಲ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ತಾ. ೩ ರಂದು ಬೆಳಿಗ್ಗೆ ೧೦ ಗಂಟೆಗೆ ಅಮ್ಮತ್ತಿಯ ಪ್ರೌಢಶಾಲಾ ಮೈದಾನದ ಕಚೇರಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ. ನಾಗೇಶ್ ತಿಳಿಸಿದ್ದಾರೆ. ಜಿಲ್ಲಾ ಫುಟ್ಬಾಲ್ ಸಂಸ್ಥೆಯಲ್ಲಿ ನೋಂದಾವಣಿ ಮಾಡಿಕೊಂಡಿರುವ ಕ್ಲಬ್‌ಗಳು ಹಾಗೂ ಫಾರಂ ಎಗೆ ಸಹಿ ಮಾಡಿರುವ ಕ್ಲಬ್‌ಗಳ ಅಂತರದಿAದ ಇಬ್ಬರು ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಹಾಜರಾಗಬೇಕೆಂದು ನಾಗೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.