ಕೂಡಿಗೆ, ಜು. 2: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯು ಈ ಬಾರಿ ಕಳೆದ ವರ್ಷಕ್ಕಿಂತ 15 ದಿನಗಳ ಮುಂಚಿತವಾಗಿಯೆ ಭರ್ತಿಯಾದ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾರಂಗಿ ಜಲಾಶಯದಲ್ಲಿ ಪೂಜೆ ಸಲ್ಲಿಸಿ ನದಿಗೆ ಬಾಗಿನ ಅರ್ಪಣೆ ಮಾಡಿದರು.

ಅಣೆಕಟ್ಟೆಯ ಮುಂಭಾಗದಲ್ಲಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಈ ಬಾರಿ ರಾಜ್ಯದಲ್ಲಿ ಹಾರಂಗಿ ಪ್ರಥಮವಾಗಿ ಭರ್ತಿಯಾದ ಅಣೆಕಟ್ಟೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 15 ದಿನಗಳ ಮುಂಚಿತವಾಗಿ ಭರ್ತಿಯಾಗಿದೆ. ಜಿಲ್ಲೆಯಿಂದ ವರ್ಷಂಪ್ರತಿ ಹಾರಂಗಿ ಮತ್ತು ಕಾವೇರಿ ನದಿಯಿಂದ ಅಂದಾಜು 450 ಟಿಎಂಸಿ ನೀರು ಹರಿದು ಕೆಆರ್‍ಎಸ್ ಅಣೆಕಟ್ಟೆಗೆ ಸೇರುತ್ತದೆ. ಇದರಿಂದಾಗಿ ಮಂಡ್ಯ, ತಮಿಳುನಾಡು, ಪಾಂಡಿಚೇರಿ ವ್ಯಾಪ್ತಿಯ ಜನರಿಗೆ ನೀರು ಬಳಕೆಗೆ ಅನುಕೂಲವಾಗುತ್ತಿದೆ. 2018-19 ಸಾಲಿನಲ್ಲಿ ಸಂಭವಿಸಿದಂತೆ ಯಾವುದೇ ರೀತಿಯ ತೊಂದರೆಗಳು ಈ ಬಾರಿ

(ಮೊದಲ ಪುಟದಿಂದ) ಆಗದಿರಲಿ ಎಂದು ಕಾವೇರಿ ಮಾತೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ರಂಜನ್ ತಿಳಿಸಿದರು.

ಈ ಸಂದರ್ಭ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್, ಕಿರಿಯ ಇಂಜಿನಿಯರ್ ಸಿದ್ದರಾಜು, ಕಿರಣ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆÀಲುವರಾಜ್, ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಕುಡಾ ಅಧ್ಯಕ್ಷ ಎಂ.ಎಂ. ಚರಣ್, ಸದಸ್ಯರಾದ ವೈಶಾಖ್, ಪುಂಡರೀಕಾಕ,್ಷ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಕೆ. ಭೋಗಪ್ಪ, ಮಣಿಕಂಠ, ದಿನೇಶ್, ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮಂಜುಳಾ, ಲೋಕೇಶ್ವರಿ ಗೋಪಾಲ್, ತಾಲೂಕು ಬಿಜೆಪಿ ಅಧ್ಯಕ್ಷ ಮನು ಕುಮಾರ್ ರೈ ಸೇರಿದಂತೆ ಬಿಜೆಪಿ ವಿವಿಧ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.