ಕೂಡಿಗೆ, ಜು. 2: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡ್ಲೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ವಿದ್ಯಾರ್ಥಿ ಸಂಘ ಹಾಗೂ ಎಸ್.ಡಿ.ಎಂ.ಸಿ. ಸಹಯೋಗ ದೊಂದಿಗೆ ನಿವೃತ್ತ ಸಾಂಖ್ಯಿಕ ಅಧಿಕಾರಿ ಪೆÇ್ರ. ಪಿ.ಸಿ. ಮಹಾಲ ಲೋಬಿಸ್ ಅವರ ಜನ್ಮದಿನಾಚರಣೆ ಹಾಗೂ ಸುಸ್ಥಿರ ಅಭಿವೃದ್ಧಿಗಾಗಿ ಶಿಕ್ಷಣ ಕುರಿತ ಜಾಗೃತಿ ಅಭಿಯಾನ 2022ವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾ ಧ್ಯಾಯ ಟಿ.ಜಿ. ಪ್ರೇಮಕುಮಾರ್, ಎನ್.ಎಸ್.ಎಸ್. ಕಾರ್ಯಚಟುವಟಿ ಕೆಗಳು ವಿದ್ಯಾರ್ಥಿಗಳ ಸವಾರ್ಂಗೀಣ ಅಭಿವೃದ್ಧಿಗೆ ಉತ್ತಮ ವೇದಿಕೆ ಕಲ್ಪಿಸುವುದರೊಂದಿಗೆ ಅವರು ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಹಕಾರಿಯಾಗಿವೆ ಎಂದರು.
ಆತ್ಮನಿರ್ಭರ ಭಾರತ ಯೋಜನೆಯ ರೂಪುರೇಷೆಗಳ ಕುರಿತು ಮಾಹಿತಿ ನೀಡಿದ ಕನ್ನಡ ಭಾಷಾ ಶಿಕ್ಷಕ ಕೆ. ಗೋಪಾಲಕೃಷ್ಣ, ಶಿಕ್ಷಣದ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಕಲಿಕೆಯನ್ನು ಉತ್ತಮಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಸಮಾಜ ವಿಜ್ಞಾನ ಶಿಕ್ಷಕಿ ಎಸ್.ಎಂ. ಗೀತಾ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ರೂಪುರೇಷೆಗಳನ್ನು ವಿವರಿಸಿದರು. ವಿಜ್ಞಾನ ಶಿಕ್ಷಕಿ ಬಿ.ಡಿ. ರಮ್ಯ, ನಿತ್ಯ ಜೀವನದಲ್ಲಿ ವಿಜ್ಞಾನ ಕಲಿಕೆಯ ಮಹತ್ವ ಕುರಿತು ತಿಳಿಸಿದರು. ಸಾಂಖ್ಯಿಕ ತಜ್ಞ ಪೆÇ್ರ. ಪಿ.ಸಿ. ಮಹಾಲನೋಬಿಸ್ ಅವರ ಜನ್ಮದಿನದ ಮಹತ್ವ ವಿವರಿಸಿದ ಆಂಗ್ಲಭಾಷಾ ಶಿಕ್ಷಕಿ ಅನ್ಸಿಲಾ ರೇಖಾ, ದೇಶದ ಆರ್ಥಿಕ ಬೆಳವಣಿಗೆಗೆ ಪೆÇ್ರ. ಪಿ.ಸಿ. ಮಹಾಲನೋಬಿಸ್ ಅವರ ಕೊಡುಗೆಗಳನ್ನು ತಿಳಿಸಿದರು. ವಿದ್ಯಾರ್ಥಿ ಪ್ರಜ್ವಲ್ ಕಾರ್ಯಕ್ರಮದ ನಿರ್ವಹಣೆ ಮಾಡಿದರು.
ಇದಕ್ಕೂ ಮೊದಲು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಚಟುವಟಿಕೆಗಳು ಸೇರಿದಂತೆ ಆತ್ಮನಿರ್ಭರ ಭಾರತ ಯೋಜನೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ವಿಜ್ಞಾನ ವಿಚಾರಗೋಷ್ಠಿ ಗಳನ್ನು ಏರ್ಪಡಿಸಲಾಗಿತ್ತು.
ನಂತರ ವಿದ್ಯಾರ್ಥಿಗಳು ವಿಜ್ಞಾನ, ಸಾಮಾಜಿಕ ವಿಚಾರಗಳ ಕುರಿತು ಜಾಗೃತಿ ಜಾಥಾ ನಡೆಸಿ ಭಿತ್ತಿಪತ್ರಗಳ ಪ್ರದರ್ಶಿಸಿದರು. ಮಕ್ಕಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು.