ಚೆಟ್ಟಳ್ಳಿ, ಜು. 2: ಹಾಲುಗುಂದ ಗ್ರಾಮ ಪಂಚಾಯಿತಿಯ ಸ್ವಚ್ಛ ಸಂಕೀರ್ಣ ಘಟಕ ಮತ್ತು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ಮಿಸಿರುವ ಉದ್ಯಾನವನವನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಉದ್ಘಾಟನೆ ಮಾಡಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ, ಶಾಸಕರ ಆಪ್ತ ಕಾರ್ಯದರ್ಶಿ ಮಧು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೈ.ಬಿ. ಸೀತಮ್ಮ, ಉಪಾಧ್ಯಕ್ಷ ಪಿ.ಎ. ದಿನೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂಚನ, ಕಾರ್ಯದರ್ಶಿ ಹಾಗೂ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಇದ್ದರು.