ಕೂಡಿಗೆ, ಜು. 2: ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಹೆಚ್ಚು ನೀರು ಬರುತ್ತಿರುವುದರಿಂದ ಅಣೆಕಟ್ಟೆಯ ನಾಲ್ಕು ಕ್ರಸ್ಟ್‍ಗೇಟ್‍ಗಳ ಮೂಲಕ ನದಿಗೆ 10,000 ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ.

ಹಾರಂಗಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದ ನಾಲ್ಕು ಕ್ರಸ್ಟ್‍ಗೇಟ್‍ಗಳ ನಿಯಂತ್ರಣ ಕೊಠಡಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳು ತೆರಳಿ ಪೂಜೆ ಸಲ್ಲಿಸಿ ನಂತರ ನದಿಗೆ ನೀರು ಹರಿಸಲಾಯಿತು.

ಕಳೆದ ಮೂರು ದಿನಗಳಿಂದ ಜಲಾಶಯ ಪ್ರದೇಶದಲ್ಲಿ ಉತ್ತಮವಾದ ಮಳೆ ಆಗುತ್ತಿರುವುದರಿಂದ ಅಣೆಕಟ್ಟೆಗೆ ಒಳ ಹರಿವು 17000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಇದರಲ್ಲಿ ಅಣೆಕಟ್ಟೆಯ ಗರಿಷ್ಠ ಮಟ್ಟವನ್ನು ಕಾಯ್ದಿರಿಸಿಕೊಂಡು ನದಿಗೆ ನೀರು ಹರಿಸಲಾಯಿತು. ಜಲಾಶಯದ ಗರಿಷ್ಠ ಮಟ್ಟ 2859 ಅಡಿಯಿದ್ದು, ಈ ಪೈಕಿ ಇಂದು 2857 ಅಡಿಯಷ್ಟು ನೀರು ಸಂಗ್ರಹವಾಗಿದೆ. ಒಳ ಹರಿವು ಹೆಚ್ಚಿದ್ದರಿಂದ 10,000 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ದಿನದ 24 ಗಂಟೆಗಳ ಮಾಹಿತಿಯನ್ನು ಪಡೆದು ಅಧಿಕಾರಿಗಳು ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ತೊಂದರೆಗಳಾಗದಂತೆ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಲಾಗಿz.É ಅದರಂತೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಭಾಗಗಳ ರಸ್ತೆ, ಕಿರು ಸೇತುವೆ, ಸೇರಿದಂತೆ (ಮೊದಲ ಪುಟದಿಂದ) ವಿವಿಧ ಭಾಗಗಳಲ್ಲಿ ಹಾನಿಯಾಗುತ್ತಿದೆ, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲೆಗೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು. ಈಗಾಗಲೇ ಕುಶಾಲನಗರ ವ್ಯಾಪ್ತಿಯ ಕೆಲ ಭಾಗದಲ್ಲಿ ಹೂಳು ಎತ್ತುವ ಕಾರ್ಯಕ್ಕೆ ನೀರಾವರಿ ಇಲಾಖೆಯ ಮೂಲಕ ಚಾಲನೆ ನೀಡಿ ಕಾಮಗಾರಿಯನ್ನು ಮಾಡಲಾಗಿದೆ. ಅದೇ ರೀತಿಯಲ್ಲಿ ಮುಂದಿನ ನವೆÀಂಬರ್ ತಿಂಗಳಲ್ಲಿ ಅಣೆಕಟ್ಟೆಯ ಹೂಳು ಎತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಈಗಾಗಲೇ ರಾಜ್ಯ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದೆ ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನವನ್ನು ಬಳಕೆ ಮಾಡಿಕೊಂಡು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪುಟ್ಟ ಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್, ಅಭಿಯಂತರರಾದ ಸಿದ್ದರಾಜ್ ಕಿರಣ್, ಸತ್ಯ ಸೇರಿದಂತೆ ಅಧಿಕಾರಿ ವರ್ಗದವರು ಹಾಜರಿದ್ದರು.