ವೀರಾಜಪೇಟೆ, ಜು. 2 : ಕಂದಾಯ ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮವು ಜುಲೈ 4 ರಂದು ಬಿಟ್ಟಂಗಾಲ ವಿಎಸ್‍ಎಸ್‍ಎನ್ ಬ್ಯಾಂಕ್ ಸಭಾಂಗಣದಲ್ಲಿ ಪೂರ್ವಾಹ್ನ 10 ಗಂಟೆಗೆ ತಹಶೀಲ್ದಾರ್ ಡಾ. ಯೋಗಾನಂದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳ ಭೂ ದಾಖಲೆಗಳಿಗೆ ಸಂಬಂಧಿಸಿದಂತೆ, ಕಂದಾಯ ಇಲಾಖೆಗೆ ಸಂಬಂಧಪಟ್ಟ ಕಾರ್ಯಗಳು, ಪೌತಿಖಾತೆ, ಪಟ್ಟೆದಾರರ ಹೆಸರು ವಜಾಗೊಳಿಸಲು, ಇಲಾಖಾ ವತಿಯಿಂದ ಕ್ರಮ ವಹಿಸಲಾಗುವುದು. ಗ್ರಾಮಸ್ಥರು ತಮ್ಮ ಅರ್ಜಿಗಳನ್ನು ನೀಡುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರಾಮ ಲೆಕ್ಕಿಗ ಹೇಮಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.