ಮಡಿಕೇರಿ, ಜು. ೩: ಪ್ರಗತಿ ಹಂತದಲ್ಲಿರುವ ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೂಚನೆ ನೀಡಿದರು.
ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಟ್ಟಿಹೊಳೆ-ಹಮ್ಮಿಯಾಲ ನಡುವೆ ನಿರ್ಮಿಸುತ್ತಿರುವ ಕಾಂಕ್ರಿಟ್ ರಸ್ತೆ ಮತ್ತು ಸೇತುವೆ ಕಾಮಗಾರಿ ಸ್ಥಳಕ್ಕೆ ಮಡಿಕೇರಿ, ಜು. ೩: ಪ್ರಗತಿ ಹಂತದಲ್ಲಿರುವ ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೂಚನೆ ನೀಡಿದರು.
ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಟ್ಟಿಹೊಳೆ-ಹಮ್ಮಿಯಾಲ ನಡುವೆ ನಿರ್ಮಿಸುತ್ತಿರುವ ಕಾಂಕ್ರಿಟ್ ರಸ್ತೆ ಮತ್ತು ಸೇತುವೆ ಕಾಮಗಾರಿ ಸ್ಥಳಕ್ಕೆ ಮಾಡಿಕೊಡುವಂತೆ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸೂಚನೆ ನೀಡಿದರು.
ಇದೇ ವೇಳೆ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಮತ್ತು ಸೂಚನೆ ನೀಡಿದರು.
ಬಳಿಕ ಮುಟ್ಲು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ಕಾರದ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ವಿನಿಯೋಗಿಸಿ, ಮಕ್ಕಳಿಗೆ ಯಾವುದೇ ತೊಂದರೆಯಾಗದAತೆ ಕ್ರಮ ವಹಿಸಿ ಎಂದು ಅಂಗನವಾಡಿ ಶಿಕ್ಷಕಿಗೆ ಅವರಿಗೆ ಸಲಹೆ ನೀಡಿದರು.
ಇದೇ ವೇಳೆ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎಂ.ಜವರೇಗೌಡ, ಕಿರಿಯ ಅಭಿಯಂತರರಾದ ಮಹದೇವ್ ಹಾಜರಿದ್ದರು.