ಮಡಿಕೇರಿ, ಜು. 2: ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಏಕೈಕ ಹಾರಂಗಿ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾಂಪ್ರದಾಯಿಕವಾಗಿ ಸರ್ಕಾರದ ಪರವಾಗಿ ಶಾಸಕ ಅಪ್ಪಚ್ಚು ರಂಜನ್ ಅವರು ಹಾರಂಗಿಗೆ ಬಾಗಿನ ಅರ್ಪಿಸಿದ್ದಾರೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಅಧಿಕಾರಿ ವರ್ಗದಿಂದ ಹೆಚ್ಚುವರಿ 10,000 ಕ್ಯೂಸೆಕ್ಸ್ ನೀರನ್ನು ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‍ಗಳ ಮೂಲಕ ನದಿಗೆ ಹೊರ ಬಿಡಲಾಗಿದೆ. ಇತ್ತ ಗಾಳಿ ಮಳೆಗೆ ಹಲವೆಡೆ ಭೂ ಕುಸಿತ, ಮನೆಗಳಿಗೆ ಹಾನಿಯಾಗಿವೆ.