ಮಡಿಕೇರಿ, ಜು. ೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಂರ‍್ರಾಷ್ಟಿçÃಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾ ಚರಣೆಯು ತಾ. ೪ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್, ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಸ್. ಗೋಪಿನಾಥ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮಾಧಿಕಾರಿ ಡಾ. ಎನ್. ಆನಂದ್, ಮಡಿಕೇರಿ ತಾಲೂಕು, ವೈದ್ಯಾಧಿಕಾರಿ ಡಾ. ಎಂ.ಯು. ಚೇತನ್, ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ್, ಮೂರ್ನಾಡು ವಿದ್ಯಾಸಂಸ್ಥೆಯ ಕಾರ್ಯಾದರ್ಶಿ ವೇಣು ಅಪ್ಪಣ್ಣ, ಮನೋವೈದ್ಯರಾದ ಡಾ. ಡೇವಿನ್ ಲಿನೇಕರ್ ಕರ್ಕಡ ಇತರರು ಪಾಲ್ಗೊಳ್ಳಲಿದ್ದಾರೆ.