ಮಡಿಕೇರಿ, ಜು. ೩: ವೀರಾಜಪೇಟೆ ಪುರಸಭೆಯ ಮುನ್ಸಿಪಲ್ ಶಾಲಾ ಕಟ್ಟಡವನ್ನು (೧.೩೦ ಎಕರೆ) ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರಿಗೆ ಹಸ್ತಾಂತರಿಸುವ ಸಲುವಾಗಿ ನಿವೇಶನ ಹಸ್ತಾಂತರ ಕಾರ್ಯಕ್ರಮ ತಾ. ೪ ರಂದು (ಇಂದು) ಮಧ್ಯಾಹ್ನ ೨.೩೦ ಗಂಟೆಗೆ ನಡೆಯಲಿದೆ.

ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಸುಜಾ ಕುಶಾಲಪ್ಪ, ವೀರಾಜಪೇಟೆ ಪುರಸಭೆ ಉಪಾಧ್ಯಕ್ಷ ಎಂ.ಕೆ. ಕುಟ್ಟಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ವೀರಾಜಪೇಟೆ ತಹಶೀಲ್ದಾರ್ ಯೋಗಾನಂದ, ವೀರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಎ. ಚಂದ್ರಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.