ಸಿದ್ದಾಪುರ, ಜು. ೩: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ದುಬಾರೆ ಆನೆ ಶಿಬಿರಕ್ಕೆ ಶನಿವಾರದಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದರು. ಕುಟುಂಬದೊAದಿಗೆ ಬೋಟ್‌ನಲ್ಲಿ ದುಬಾರೆ ಸಾಕಾನೆ ಶಿಬಿರಕ್ಕೆ ತೆರಳಿದರು. ಸಾಕಾನೆಗಳಿಗೆ ಬೆಲ್ಲವನ್ನು ತಿನ್ನಿಸಿದರು. ಅಲ್ಲದೇ ಅರಣ್ಯ ಇಲಾಖಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇದಾದ ಬಳಿಕ ದುಬಾರೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ಏರ್ಪಡಿಸಲಾದ ವನ ಮಹೋತ್ಸವ ದಲ್ಲಿ ಪಾಲ್ಗೊಂಡು ಗಿಡನೆಟ್ಟರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆನೆ ಮಾವುತರು ರಾಜ್ಯಪಾಲರೊಂದಿಗೆ ಫೋಟೋ ತೆಗೆಸಿಕೊಂಡರು. ನಂತರ ಬೆಳಗ್ಗಿನ ಉಪಹಾರ ಸೇವಿಸಿ ಕುಟುಂಬ ದವರೊಂದಿಗೆ ಕುಶಾಲನಗರಕ್ಕೆ ತೆರಳಿದರು. ಈ ಸಂದರ್ಭ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಚೀರ ಎ. ಅಯ್ಯಪ್ಪ, ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೂರ್ತಿ, ಡಿ.ಸಿ.ಎಫ್. ಪೂವಯ್ಯ, ಕುಶಾಲನಗರ ವಲಯ ಅರಣ್ಯಾ ಧಿಕಾರಿ ಶಿವರಾಂ, ಉಪವಲಯ ಅರಣ್ಯಾಧಿಕಾರಿಗಳಾದ ವಿಲಾಸ್ ಗೌಡ, ಸುಬ್ರಾಯ, ರಂಜನ್, ಮಡಿಕೇರಿ ವೃತ್ತ ನಿರೀಕ್ಷಕ ಪಿ.ವಿ. ವೆಂಕಟೇಶ್, ಸಿದ್ದಾಪುರ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಇನ್ನಿತರರು ಅಧಿಕಾರಿಗಳು ಹಾಜರಿದ್ದರು.