ವೀರಾಜಪೇಟೆ, ಜು. ೩: ವೀರಾಜಪೇಟೆ ಪ.ಪಂ. ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಅಂಗಡಿಗಳನ್ನು ಪರಿಶೀಲಿಸಲಾಯಿತು. ಸುಮಾರು ೫ ಕೆಜಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡು ೬೦೦ ರೂಪಾಯಿಗಳ ದಂಡ ವಸೂಲಿ ಮಾಡಲಾಗಿದೆ.

*ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಅಂಗಡಿಗಳನ್ನು ಪರಿಶೀಲಿಸಲಾಯಿತು. ೬ ಕೆಜಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡು ೧೨೦೦ ರೂಪಾಯಿಗಳ ದಂಡ ವಸೂಲಿಸಲಾಗಿದೆ ಎಂದು ಪೌರಾಯುಕ್ತರು ಮಾಹಿತಿ ನೀಡಿದ್ದಾರೆ.