ಮಡಿಕೇರಿ, ಜು. ೪: ಸಾಂಖ್ಯಿಕ ದಿನಾಚರಣೆಯ ಅಂಗವಾಗಿ ಸುಸ್ಥಿರ ಅಭಿವೃದ್ಧಿಗಾಗಿ ಅಗತ್ಯ ದತ್ತಾಂಶ ಗುರಿಯನ್ನು ಸಾಧಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು - ಮಡಿಕೇರಿ ವಕೀಲರ ಸಂಘ, ಮಡಿಕೇರಿ ಇವರ ಸಹಯೋಗ ದೊಂದಿಗೆ ಮೂರ್ನಾಡು ಸಮುದಾಯ ಭವನದಲ್ಲಿ ಪೋಷಣ್ ಅಭಿಯಾನದಡಿ ಪೌಷ್ಟಿಕತೆಯಲ್ಲಿ ಅಭಿವೃದ್ಧಿ, ಹಸಿವು ಮುಕ್ತ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಸ್ವಚ್ಛ ನೀರು ಮತ್ತು ನೈರ್ಮಲ್ಯದ ಬಗ್ಗೆ ಕಾರ್ಯಾಗಾರ ಹಾಗೂ ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಸಾದ್ ಕೆ.ಬಿ. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು, ಮಡಿಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ಶ್ರಮಿಕ ವರ್ಗದವರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿ ಯಲ್ಲಿ ಉಚಿತ ಕಾನೂನು ನೆರವು ಮತ್ತು ಕಾನೂನಿನ ಅರಿವು ಮೂಡಿಸಿ ದರು. ಕೌಟುಂಬಿಕ ದೌರ್ಜನ್ಯ ಕಾಯ್ದೆಯ ಬಗ್ಗೆ, ಲಿಂಗ ಸಮಾನತೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ದಯಾನಂದ ಅವರು ಸರ್ವರಿಗೂ ಸಮ ಪಾಲು, ಸರ್ವರಿಗೂ ಸಮ ಬಾಳು - ಸಮಾನತೆಯೆ ಸಂವಿಧಾನದ ಹಕ್ಕು, ಉತ್ತಮ ಶಿಕ್ಷಣ, ಪೌಷ್ಠಿಕ ಆಹಾರ ಸಂವಿಧಾನದ ಮೂಲ ಆಶಯ ಎಂದು ಹೇಳುತ್ತಾ ಗುಣಮಟ್ಟದ ಶಿಕ್ಷಣ ಹಾಗೂ ಸಮಾನತೆಯ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿಯ ಮಹಿಳಾ ಮೇಲ್ವಿಚಾರಕಿ ಸವಿತ ಸಿ.ಪಿ. ಮಾತನಾಡಿ ಮಹಿಳಾ ಮತ್ತು ಮಕ್ಕಳ ಸಹಾಯವಾಣಿ, ಮಕ್ಕಳಿಗೆ ಉooಜ ಖಿouಛಿh & ಃಚಿಜ ಖಿouಛಿh ಬಗ್ಗೆ, ಉದ್ಯೋಗಿನಿ ಯೋಜನೆಯ ಬಗ್ಗೆ ಪೌಷ್ಟಿಕ ಆಹಾರದ ಅಗತ್ಯತೆಯ ಬಗ್ಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಮೂರ್ನಾಡು ಗ್ರಾಮ ಪಂಚಾಯತ್ ಅಧ್ಯಕೆÀ್ಷ ಸುಜಾತ ಚಂದ್ರಶೇಖರ್ ಅವರು ಪೌಷ್ಟಿಕ ಆಹಾರ ಸೇವನೆಯ ಬಗ್ಗೆ, ಲಿಂಗ ಸಮಾನತೆ ಹಾಗೂ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ, ಕಾನೂನು ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಸ್ತೂರಿ, ಶಿಕ್ಷಕರು, ಸಂಯುಕ್ತ ಫ್ರೌಡಶಾಲೆ, ಮೂರ್ನಾಡು, ಪೋಷಣ್ ಅಭಿಯಾನ ಹಾಗೂ ಮಾತೃ ವಂದನಾ ಯೋಜನೆಯ ಸಿಬ್ಬಂದಿಗಳಾದ ನಿತಿನ್, ನೈನಾ, ಸುಗುಣ ಮತ್ತು ಹೀರತ್ ನ್ನೀಸಾ ಹಾಗೂ ಮೂರ್ನಾಡು ಗ್ರಾಮ ಪಂಚಾಯಿತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.