ಮಡಿಕೇರಿ, ಜು. ೪: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ತಾ. ೧೫ ರಂದು ಆಚರಿಸುತ್ತಿದ್ದು, ಇದರ ಪ್ರಯುಕ್ತ ರಾಜ್ಯಮಟ್ಟದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ೮ ರಿಂದ ೧೨ನೇ ತರಗತಿ, ಐಟಿಐ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.
ಆಸಕ್ತ ವಿದ್ಯಾರ್ಥಿಗಳು ಒಂದು ವಿಷಯದಲ್ಲಿ ೧೦೦೦ ದಿಂದ ೧೨೦೦ ಪದಗಳಿಗೆ ಮೀರದಂತೆ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ hಣಣಠಿ://ತಿತಿತಿ.ಞಚಿushಚಿಟಞಚಿಡಿ.ಛಿom/ಚಿಠಿಠಿ/sಞiಟಟ-essಚಿಥಿ-ಛಿomಠಿeಣiಣioಟಿ ಲಿಂಕ್/ ಕ್ಯೂ ಆರ್ ಕೋಡ್ ಬಳಸಿಕೊಂಡು ತಾ. ೧೦ ರೊಳಗೆ ಪ್ರಬಂಧ ಸಲ್ಲಿಸಬಹುದು.
ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರಬಂಧ ವಿಷಯ: ಕೈಗಾರಿಕೆ-ಶೈಕ್ಷಣಿಕ ಒಗ್ಗೂಡುವಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು, ಶಕ್ತಿಯುತ ಹಾಗೂ ಸುಸ್ಥಿರ ಬೆಳವಣಿಗೆಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮಾರ್ಗಗಳು ಹಾಗೂ ಕೌಶಲ್ಯ ಮತ್ತು ಸಾಮರ್ಥ್ಯಗಳ ಮೇಲೆ ಕೇಂದ್ರಿಕೃತವಾದ ಉನ್ನತ ಶಿಕ್ಷಣದ ಬಗ್ಗೆ ಮರುಚಿಂತನೆ.
೮ ರಿಂದ ೧೨ನೇ ತರಗತಿ-ಐಟಿಐ ವಿದ್ಯಾರ್ಥಿಗಳಿಗೆ ವಿಷಯ: ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಪ್ರಾಮುಖ್ಯತೆ ಮತ್ತು ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ.
ಆಯ್ಕೆಯಾದವರಿಗೆ ಪ್ರಥಮ ಬಹುಮಾನ ರೂ. ೧೫ ಸಾವಿರ, ದ್ವಿತೀಯ ಬಹುಮಾನ ರೂ. ೧೦ ಸಾವಿರ ಹಾಗೂ ತೃತೀಯ ಬಹುಮಾನ ರೂ. ೫ ಸಾವಿರ ನೀಡಲಾಗುವುದು. ಜಿಲ್ಲಾ ಮಟ್ಟದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿಜೇತರಿಗೆ ಆಯಾಯ ಜಿಲ್ಲೆಗಳ ‘ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ದೂ. ೦೮೨೭೨-೨೨೫೮೫೧ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ತಿಳಿಸಿದ್ದಾರೆ.