ಮಡಿಕೇರಿ, ಜು. ೪: ವೀರಾಜಪೇಟೆ ಅರಣ್ಯ ವಲಯದ ಅಮ್ಮತ್ತಿ ಶಾಖೆಯ ವ್ಯಾಪ್ತಿಗೆ ಬರುವ ಗ್ರಾಮಗಳಾದ ಹಾಲುಗುಂದ, ಬೈರಂಬಾಡ, ಕಣ್ಣಂಗಾಲ, ಯಡೂರು, ಹಚ್ಚಿನಾಡು, ಗುಹ್ಯ, ಪುಲಿಯೇರಿ, ಇಂಜಲಗೆರೆ, ಸಿದ್ದಾಪುರ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ತಾ.೫ರಂದು (ಇಂದು) ನಡೆಯಲಿದೆ.

ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯ ಅಧಿಕಾರಿಗಳಾದ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.