ಸೋಮವಾರಪೇಟೆ, ಜು.೪: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರ ಹುಟ್ಟು ಹಬ್ಬದ ಅಂಗವಾಗಿ ಇಲ್ಲಿನ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ರಂಜನ್ ಅಭಿಮಾನಿಗಳು ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕರಿಗೆ ಅಭಿಮಾನಿಗಳು, ಸಾರ್ವಜನಿಕರು ಶುಭಾಶಯ ಕೋರಿದರು. ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಶಾಸಕರು, ರೋಗಿಗಳ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದರು.