ಮಡಿಕೇರಿ, ಜು. ೪: ಕೊಡಗಿನಲ್ಲಿರುವ ಹೊರ ರಾಜ್ಯದ ವಲಸೆ ಕಾರ್ಮಿಕರ ಬಗ್ಗೆ ನಿಗಾ ವಹಿಸುವುದರೊಂದಿಗೆ ಅಪರಾಧ ಕೃತ್ಯಗಳ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಮಧುಕರ್ ಪವಾರ್ ಹೇಳಿದರು.ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಇಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ಸಂಬAಧ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಡಿಕೇರಿ ಗ್ರಾಮಾಂತರ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಐಜಿಪಿ ಕೊಡಗಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೊರರಾಜ್ಯದ ವಲಸೆ ಕಾರ್ಮಿಕರ ಗುರುತು ಪರಿಚಯ ಸಂಗ್ರಹಿಸುವುದರೊAದಿಗೆ, ಅವರುಗಳ ಮೇಲೆ ನಿಗಾ ವಹಿಸುವಂತೆ ನಿರ್ದೇಶನ ನೀಡಿದ್ದೇನೆ. ಹೊರ ರಾಜ್ಯದ ಕಾರ್ಮಿಕರಿಂದ ನಡೆದ ಅಪರಾಧ ಪ್ರಕರಣಗಳಿಗೆ ಸಂಬAಧಿಸಿದAತೆ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೂ, ಮುಂದಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ನಡೆಯದ ರೀತಿಯಲ್ಲಿ ಪೊಲೀಸ್ ಇಲಾಖೆ ಎಚ್ಚರ ವಹಿಸಲಿದೆ ಎಂದು ಹೇಳಿದರು.
ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದು, ಸೂಕ್ತ ಬಂದೋಬಸ್ತ್ ನಿಯೋಜನೆಗೆ ಸೂಚಿಸಲಾಗಿದೆ. ಅಕ್ರಮ ಗೋ ಸಾಗಾಟಗಳನ್ನು ತಡೆಯುವ ನಿಟ್ಟಿನಲ್ಲಿ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸಲು ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಪ್ರವೀಣ್ ಮಧುಕರ್ ಪವಾರ್ ತಿಳಿಸಿದರು. ಅಗತ್ಯವಿರುವೆಡೆ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದು; ಪೊಲೀಸ್ ಗಸ್ತು ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಭಾಯಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಗಂಭೀರ ವಿಚಾರವಾಗಿದೆ ಕೊಡಗಿನಲ್ಲಿ ೨೦೨೦ರಲ್ಲಿ ೫೦, ೨೦೨೧ರಲ್ಲಿ ೬೦ ಹಾಗೂ ೨೦೨೨ರಲ್ಲಿ ಜೂನ್ವರೆಗೆ ೪೪ ಅಪಘಾತದಿಂದ ಸಾವು ಪ್ರಕರಣಗಳು ಸಂಭವಿಸಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಕೆಲಸವನ್ನು ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಚುರುಕುಗೊಳಿಸಲು ಸೂಚನೆ ನೀಡಿದ್ದೇನೆ. ಅಪಘಾತ ವಲಯಗಳನ್ನು ಗುರುತು ಮಾಡುವ ಕಾರ್ಯವನ್ನು ಕೂಡ ಮಾಡಲಾಗುತ್ತಿದ್ದು, ಹೆದ್ದಾರಿ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ಅಪಘಾತ ಪ್ರಕರಣಗಳ ತಡೆಗೆ ಕ್ರಮ ಕೈಗೊಳ್ಳುವುದಾಗಿ ಪ್ರವೀಣ್ ಮಧುಕರ್ ಪವಾರ್ ಹೇಳಿದರು.
ಜಿಲ್ಲಾ ಪೊಲೀಸ್ ಕಚೇರಿಯ ನೂತನ ಕಟ್ಟಡ ಕಾಮಗಾರಿ ಉತ್ತಮವಾಗಿ ನಡೆಯುತ್ತಿದ್ದು, ಮರ್ನಾಲ್ಕು ತಿಂಗಳಿನಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಎಸ್ಪಿ ಎಂ.ಎ. ಅಯ್ಯಪ್ಪ, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಸಂಚಾರಿ ಠಾಣಾಧಿಕಾರಿ ಅಂತಿಮ ಹಾಜರಿದ್ದರು. ಉಜ್ವಲ್ ರಂಜಿತ್.