ಸಿದ್ದಾಪುರ, ಜು. ೪: ನೆಲ್ಯಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಮಿತಿಮೀರಿದ ಕಾಡಾನೆಗಳ ಹಾವಳಿಯಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ನೆಲ್ಯಹುದಿಕೇರಿಯ ಬೆಟ್ಟದಕಾಡು, ನಲ್ವತ್ತೇಕರೆ ಅತ್ತಿಮಂಗಲ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟದ ಒಳಗೆ ಬೀಡುಬಿಟ್ಟು ದಾಂಧಲೆ ನಡೆಸುತ್ತಿದೆ. ಅಲ್ಲದೇ ಕೃಷಿ ಫಸಲುಗಳನ್ನು ನಾಶಪಡಿಸುತ್ತಿದೆ.
ರಾತ್ರಿ ಸಮಯದಲ್ಲಿ ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ಸಂಚರಿಸುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಾಲ್ಕು ಮರಿಯಾನೆಗಳು ಸೇರಿ ೧೦ಕ್ಕೂ ಅಧಿಕ ಕಾಡಾನೆಗಳು ಕಾಫಿ ತೋಟದೊಳಗೆ ಬೀಡು ಬಿಟ್ಟಿವೆೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾತ್ರಿ ಸಮಯದಲ್ಲಿ ಕಾಡಾನೆಗಳನ್ನು ಫಸಲುಗಳನ್ನು ನಾಶಪಡಿಸುತ್ತಿದೆ.
ರಾತ್ರಿ ಸಮಯದಲ್ಲಿ ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ಸಂಚರಿಸುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಾಲ್ಕು ಮರಿಯಾನೆಗಳು ಸೇರಿ ೧೦ಕ್ಕೂ ಅಧಿಕ ಕಾಡಾನೆಗಳು ಕಾಫಿ ತೋಟದೊಳಗೆ ಬೀಡು ಬಿಟ್ಟಿವೆÉ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾತ್ರಿ ಸಮಯದಲ್ಲಿ ಕಾಡಾನೆಗಳನ್ನು ಓಡಿಸಲು ಗ್ರಾಮಸ್ಥರು ಪ್ರಯತ್ನಿಸಿದರೂ ಕೂಡ ಕಾಡಾನೆಗಳು ತೋಟ ಬಿಟ್ಟು ಕದಲುತ್ತಿಲ್ಲ. ಇತ್ತೀಚೆಗೆ ಅರಣ್ಯ ಇಲಾಖಾಧಿಕಾರಿಗಳು ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿ ಕಾಡಿಗಟ್ಟಲು ಪ್ರಯತ್ನಿಸಿದರು. ಆದರೆ ಕಾಡಾನೆಗಳು ಬೇರೆ ಬೇರೆ ಗುಂಪಾಗಿ ಕೆಲವು ಗುಂಪುಗಳ ಕಾಡಾನೆಗಳು ಕಾಫಿ ತೋಟದಲ್ಲಿ ಉಳಿದಿದ್ದವು. ಕಾಡಿಗೆ ತೆರಳಿದ ಆನೆಗಳು ಹಾಗೂ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳು ಇದೀಗ ಕಾಫಿ ತೋಟಗಳಲ್ಲಿ ಸುತ್ತಾಡುತ್ತಿವೆÉ. ಇದರಿಂದಾಗಿ ಕಾರ್ಮಿಕರಿಗೂ ಕೂಡ ಕೆಲಸ ಮಾಡಲು ಭಯದ ವಾತಾವರಣ ಮೂಡಿದೆ. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.