ಒಂದೇ ದಿನ ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನ
ಬೆAಗಳೂರು, ಜು. ೪: ಪಿ.ಎಸ್.ಐ. ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಎಡಿಜಿಪಿ ಅಮೃತ್ ಪೌಲ್ ಮತ್ತು ಲಂಚ ಪ್ರಕರಣಕ್ಕೆ ಸಂಬAಧಿಸಿದAತೆ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರನ್ನು ಸೋಮವಾರ ಬಂಧಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಯಾವುದೇ ತನಿಖೆ ಆದರೂ ಕಾನೂನಿನ ಪ್ರಕಾರವೇ ನಡೆಯುತ್ತದೆ. ಈ ಮಾತನ್ನು ನಾನು ಆಗಲೇ ಹೇಳ್ತಿದ್ದೆ. ಯಾರ ಬಗ್ಗೆಯೂ ಮುಲಾಜಿಲ್ಲ. ಯಾವ ಹಂತದಲ್ಲಿ ಸಾಕ್ಷಿ ಆಧಾರ ಇಟ್ಕೊಂಡು ಕ್ರಮ ತಗೋಬೇಕೋ ಆ ಕೆಲಸವನ್ನು ತನಿಖಾಧಿಕಾರಿಗಳು ಮಾಡ್ತಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಈ ಕ್ರಮ ಆಗ್ತಿದೆ ಎಂದು ಬೊಮ್ಮಾಯಿ ತಿಳಿಸಿದರು. ಇಂದು ಕಬ್ಬನ್ ಪಾರ್ಕ್ನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ. ಸಾಕ್ಷö್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎಷ್ಟೇ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆದಿರಲಿಲ್ಲ ಎಂದರು. ಅಮೃತ್ ಪೌಲ್ ಬಂಧನದಿAದ ರಾಜ್ಯ ಸರ್ಕಾರಕ್ಕೆ ಯಾವುದೇ ಮುಜುಗರ ಆಗಿಲ್ಲ. ತಪ್ಪಿತಸ್ಥರನ್ನು ಬಂಧಿಸುವುದಾಗಿ ಹೇಳಿದ್ದೆ. ಆ ಕೆಲಸವನ್ನು ಸರ್ಕಾರ ಮಾಡಿದೆ. ನಮ್ಮ ಸರ್ಕಾರ ಬೇರೆ ಯಾವುದೇ ಸರ್ಕಾರ ಇದ್ದರೂ ಈ ಕೆಲಸ ಮಾಡುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.
ಬಂಧಿತ ಎಡಿಜಿಪಿ ಅಮೃತ್ ಪೌಲ್ ೧೦ ದಿನ ಸಿಐಡಿ ವಶಕ್ಕೆ
ಬೆಂಗಳೂರು, ಜು.೪: ಪಿ.ಎಸ್.ಐ. ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ೧೦ ದಿನ ಸಿಐಡಿ ವಶಕ್ಕೆ ನೀಡಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಇಂದು ಸಿಐಡಿ ಅಧಿಕೃತವಾಗಿ ಬಂಧಿಸಿದೆ. ಅಮೃತ್ ಪೌಲ್ ೨೫ ಅಭ್ಯರ್ಥಿಗಳ ಜೊತೆ ೩೦ ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ಮತ್ತಷ್ಟು ವಿಚಾರಣೆ ನಡೆಸಲು ಸಿಐಡಿ ಅವರನ್ನು ಬಂಧಿಸಿದೆ. ಅಮೃತ್ ಪೌಲ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಬೆಂಗಳೂರಿನ ೧ನೇ ಎಸಿಎಂಎA ಕೋರ್ಟ್ ಗೆ ಹಾಜರುಪಡಿಸಲಾಯಿತು. ಆರೋಪಿ ಅಧಿಕಾರಿಯನ್ನು ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಜುಲೈ ೧೩ರ ವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ೫೪೫ ಪಿಎಸ್ಐ ನೇಮಕಾತಿ ಅಕ್ರಮ ಸಂಬAಧ ಅಮೃತ್ ಪೌಲ್ ಅವರಿಗೆ ಹಲವು ದೂರುಗಳು ಬಂದಿದ್ದು, ಇದನ್ನು ಅವರು ನಿರ್ಲಕ್ಷಿಸಿದ್ದರು ಎಂಬ ಆರೋಪ ಸಹ ಅವರ ವಿರುದ್ಧ ಕೇಳಿಬಂದಿತ್ತು. ಅಕ್ರಮ ಬಯಲಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯಿಂದ ವರ್ಗಾಯಿಸಲಾಗಿತ್ತು. ಪಿಎಸ್ಐ ನೇಮಕಾತಿ ಹಗರಣದಲ್ಲಿ ನಡೆಯುತ್ತಿರುವ ತನಿಖೆಗೆ ಸಂಬAಧಿಸಿದAತೆ ಇಂದು ಕಾರ್ಲ್ಟನ್ ಹೌಸ್ನಲ್ಲಿರುವ ಸಿಐಡಿ ಕಚೇರಿಗೆ ೧೯೯೫ ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪೌಲ್ ಅವರನ್ನು ಮೂರನೇ ಬಾರಿ ವಿಚಾರಣೆಗೆ ಕರೆಯಲಾಗಿತ್ತು. ಹಗರಣದಲ್ಲಿ ಪೌಲ್ ಸೇರಿದಂತೆ ೭೯ ಜನರನ್ನು ಬಂಧಿಸಿರುವ ಸಿಐಡಿ ಇದುವರೆಗೆ ಎಂಟು ಎಫ್ಐಆರ್ಗಳನ್ನು ದಾಖಲಿಸಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಅವರು ನೇಮಕಾತಿ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಪರೀಕ್ಷೆಗಳು ನಡೆದಿದ್ದವು. ಹಗರಣ ಹೊರಬಿದ್ದ ಕೂಡಲೇ ಸರ್ಕಾರವು ಪೌಲ್ನನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾಯಿಸಿತ್ತು. ೫೪೫ ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಬಲ್ಲ ಮೂಲಗಳ ಪ್ರಕಾರ, ಇಂದು ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಬಂದ ಪೌಲ್ ಅವರನ್ನು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಶ್ರೇಣಿಯ ತನಿಖಾಧಿಕಾರಿ ವಿಚಾರಣೆಗೆ ಒಳಪಡಿಸಿದರು. ನಂತರ ಅವರನ್ನು ಮಧ್ಯಾಹ್ನ ೨ ಗಂಟೆಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟçದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಮುಂಬೈ, ಜು. ೪: ತೈಲಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಮಹಾರಾಷ್ಟ್ರ ಜನತೆಗೆ ಹೊಸ ಸಿಎಂ ಏಕನಾಥ್ ಶಿಂಧೆ ಗುಡ್ ನ್ಯೂಸ್ ನೀಡಿದ್ದಾರೆ. ಮಹಾರಾಷ್ಟ್ರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿಮೆ ಮಾಡಲಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪರಿಣಾಮಕಾರಿಯಾಗಿ ಕಡಿಮೆ ಮಾಡಲಾಗುವುದು ಎಂದು ಏಕನಾಥ್ ಶಿಂಧೆ ಸೋಮವಾರ ಘೋಷಿಸಿದ್ದಾರೆ. ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ತಮ್ಮ ಮೊದಲ ಭಾಷಣದಲ್ಲೇ ದೊಡ್ಡ ಘೋಷಣೆ ಮಾಡಿದ್ದು, ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸುವುದಾಗಿ ಇಂದು ಹೇಳಿದ್ದಾರೆ. ಬಿಜೆಪಿ ಆಡಳಿತವಿರುವ ಬಹುತೇಕ ರಾಜ್ಯಗಳು ಇಂಧನ ಬೆಲೆಯನ್ನು ಕಡಿತಗೊಳಿಸಿದ್ದರೆ, ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳು ಈ ಕ್ರಮ ಕೈಗೊಳ್ಳಲು ಸಿದ್ಧರಿಲ್ಲ.ಕಳೆದ ವರ್ಷ ನವೆಂಬರ್ನಲ್ಲಿ, ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ ೫ ರೂ ಮತ್ತು ೧೦ ರೂ. ರಷ್ಟು ಕಡಿತಗೊಳಿಸಿತ್ತು. ಹೆಚ್ಚಿನ ಬಿಜೆಪಿ ಆಡಳಿತದ ರಾಜ್ಯಗಳು ವ್ಯಾಟ್ ಅನ್ನು ಕಡಿತಗೊಳಿಸಿದ್ದವು. ಮೇ ತಿಂಗಳಲ್ಲಿ, ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರಿಂದ ಉತ್ತರ ಪ್ರದೇಶದಂತಹ ರಾಜ್ಯಗಳು ವ್ಯಾಟ್ ಅನ್ನು ಮತ್ತಷ್ಟು ಕಡಿಮೆಗೊಳಿಸಿದವು. ಆದರೆ ಜನರಿಗೆ ಪರಿಹಾರ ಕ್ರಮವಾಗಿ ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸುವ ಪ್ರಧಾನಿಯವರ ಸಲಹೆಯನ್ನು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳು ತಿರಸ್ಕರಿಸಿದವು. ಈ ರಾಜ್ಯಗಳು ಈ ಹಿಂದೆಯೂ ನಿರಾಕರಿಸಿದ್ದವು. ಇದು ತಮ್ಮ ಆದಾಯದ ಮೇಲೆ ಭಾರಿ ಋಣಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು.
ತಮಿಳುನಾಡಿಗೆ ಸ್ವಾಯತ್ತತೆ ನೀಡಲು ಆಗ್ರಹ
ಚೆನ್ನೆöÊ, ಜು. ೪: ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಒತ್ತಾಯಿಸಿರುವ ಡಿಎಂಕೆ ನಾಯಕ ಎ ರಾಜಾ ಅವರು, ಪ್ರತ್ಯೇಕ ದೇಶಕ್ಕಾಗಿ ಹೋರಾಟ ನಡೆಸುವ ಸ್ಥಿತಿಗೆ ನಮ್ಮನ್ನು ತಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಪಕ್ಷದ ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ, ದ್ರಾವಿಡ ಚಳವಳಿಯ ನೇತಾರರಾದ ಪೆರಿಯಾರ್ ಅವರು ಸ್ವತಂತ್ರ ತಮಿಳುನಾಡುಗಾಗಿ ಪ್ರತಿಪಾದಿಸಿದ್ದರು. ಆದರೆ ಡಿಎಂಕೆ ಅದರಿಂದ ದೂರ ಸರಿದಿದೆ ಎಂದು ಹೇಳಿದರು. ಈ ಸಂಬAಧ ಪಶ್ಚಿಮ ತಮಿಳುನಾಡಿನ ನಾಮಕ್ಕಲ್ನಲ್ಲಿ ಸಮಾವೇಶ ನಡೆದಿತ್ತು. ನಮ್ಮ ಪಕ್ಷವು ಪೆರಿಯಾರ್ ಅವರನ್ನು ಒಪ್ಪಿಕೊಂಡರೂ, ಸಮಗ್ರತೆ ಮತ್ತು ಪ್ರಜಾಪ್ರಭುತ್ವವನ್ನು ಬೆಂಬಲಿಸಿದೆ. ಭಾರತದ ಒಳಿತನ್ನು ಬಯಸುತ್ತಿರುವ ನಾವು ಇದನ್ನೆ ಮುಂದುವರೆಸಿಕೊAಡು ಹೋಗಲು ಬಯಸುತ್ತದೆ. ಭಾರತಕ್ಕೆ ಜಯವಾಗಲಿ ಎಂದು ಹೇಳಿದರು. "ನಾನು ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರಿಗೆ ಅತ್ಯಂತ ನಮ್ರತೆಯಿಂದ ಹೇಳುತ್ತಿದ್ದೇನೆ, ವೇದಿಕೆಯಲ್ಲಿ (ನಮ್ಮ) ನಾಯಕರ ಸಮ್ಮುಖದಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಮುಖ್ಯಮಂತ್ರಿ ಅಣ್ಣಾ (ಸಿಎನ್ ಅಣ್ಣಾದೊರೈ, ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಸಂಸ್ಥಾಪಕ) ಅವರ ಹಾದಿಯಲ್ಲಿ ನಡೆಯುತ್ತಿದ್ದಾರೆ. ನಮ್ಮನ್ನು ಪೆರಿಯಾರ್ ಹಾದಿಯಲ್ಲಿ ತಳ್ಳಬೇಡಿ. ನಮಗೆ ಪ್ರತ್ಯೇಕ ದೇಶ ಬೇಡುವಂತೆ ಮಾಡಬೇಡಿ, ರಾಜ್ಯಕ್ಕೆ ಸ್ವಾಯತ್ತತೆ ನೀಡಿ. ಅಲ್ಲಿಯವರೆಗೂ ನಾವು ವಿರಮಿಸುವುದಿಲ್ಲ,’’ ಎಂದು ರಾಜಾ ಹೇಳಿದ್ದಾರೆ.