ವೀರಾಜಪೇಟೆ, ಜು. ೪: ಬೇಟೋಳಿ ಗ್ರಾ. ಪಂ. ವ್ಯಾಪ್ತಿಯ ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ ೨೦೨೨ರ ಸಂಬAಧ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. ೯೦ ಅಂಕಗಳನ್ನು ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೇಟೋಳಿ ಸರಕಾರಿ ಪ್ರೌಢಶಾಲೆಗೆ ಪುರಸ್ಕಾರಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುವುದು ಮತ್ತು ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರಿಂದ ಪಡೆದುಕೊಳ್ಳಲಾಗುವುದು. ವಿದ್ಯಾರ್ಥಿಗಳು ಅರ್ಜಿ ಮತ್ತು ಅಂಕಪಟ್ಟಿಯನ್ನು ಗ್ರಾ.ಪಂ. ಕಚೇರಿಗೆ ತಾ. ೧೧ ರೊಳಗೆ ನೀಡಬೇಕು. ಬೇಟೋಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ರೀಡೆ ಮತ್ತು ಕಲೆಗಳಲ್ಲಿ ರಾಜ್ಯ, ರಾಷ್ಟçಮಟ್ಟದಲ್ಲಿ ಸಾಧನೆಗೈದ ಸಾಧಕರುಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸುವಂತೆ ಹಾಗೂ ಅರ್ಜಿದಾರರು ಕಡ್ಡಾಯವಾಗಿ ಬೇಟೋಳಿ ಪಂಚಾಯಿತಿ ವಾಪ್ತಿಯ ನಿವಾಸಿಗಳಾಗಿರಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.