ಮಡಿಕೇರಿ, ಜು. ೬: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಹತ್ತನೇ ತರಗತಿ ಹಾಗೂ ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮಡಿಕೇರಿ ನಗರದ ದಲಿತ ವಿದ್ಯಾರ್ಥಿಗಳಿಗೆ ಹಾಗೂ ನಗರಸಭೆಯ ೩ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಲಿದೆ.

ತಾ. ೮ ರಂದು ಮಧ್ಯಾಹ್ನ ೨ ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ಅಂಚೆ ಅಧೀಕ್ಷಕ ಹೆಚ್.ಜೆ. ಸೋಮಯ್ಯ ಉದ್ಘಾಟಿಸಲಿದ್ದು, ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್.ಬಿ. ಚಂದ್ರಶೇಖರ್ ಮುಖ್ಯ ಭಾಷಣ ಮಾಡಲಿದ್ದಾರೆ. ನಗರ ಸಂಚಾಲಕ ಸಿದ್ದೇಶ್ವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಭಾರತ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಜಿಲ್ಲಾ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಗುತ್ತಿಗೆದಾರ ಐತ್ತಪ್ಪ ರೈ, ಜಿಲ್ಲಾ ಸಂಚಾಲಕ ಹೆಚ್.ಎಲ್, ದಿವಾಕರ್, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸಂತೋಷ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.