ಕುಶಾಲನಗರ, ಜು. ೬: ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪದ ನಡುವೆ ಮನೆ ಕಳೆದುಕೊಂಡ ಸಂತ್ರಸ್ತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ೫ ಲಕ್ಷ ರೂ.ಗಳ ಪರಿಹಾರ ನೀಡ ಲಾಗುವುದು ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.ಕುಶಾಲನಗರದ ಸಮೀಪದ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಒಂದು ಮನೆ ಕುಸಿದು ಬಿದ್ದಿದ್ದು, ಸರ್ಕಾರದಿಂದ ಪರಿಹಾರ ನೀಡಲಾಗುವುದು. ಗುರುವಾರ ತಾನು ಮತ್ತು ರಾಜ್ಯ ಸರ್ಕಾರದ ವಿದ್ಯುತ್ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಲಾಗುವುದು ಎಂದರು. ಜೊತೆಗೆ ಜಿಲ್ಲೆಯ ಚೆಂಬು ಮತ್ತು ಇತರ ಭಾಗಗಳಲ್ಲಿ ಭೂಕಂಪನ ಉಂಟಾಗಿರುವ ಪ್ರದೇಶಗಳಿಗೂ ಭೇಟಿ ನೀಡಿ ಕ್ರಮ ಕೈಗೊಳ್ಳಲಾಗುವುದು, ಈ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರು ಹೇಳಿದರು.

ಈಗಾಗಲೇ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಎನ್ ಡಿ ಆರ್ ಎಫ್ ತಂಡಗಳು ಭೇಟಿ ನೀಡಿ ಸರ್ಕಾರದ ವಿದ್ಯುತ್ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಲಾಗುವುದು ಎಂದರು. ಜೊತೆಗೆ ಜಿಲ್ಲೆಯ ಚೆಂಬು ಮತ್ತು ಇತರ ಭಾಗಗಳಲ್ಲಿ ಭೂಕಂಪನ ಉಂಟಾಗಿರುವ ಪ್ರದೇಶಗಳಿಗೂ ಭೇಟಿ ನೀಡಿ ಕ್ರಮ ಕೈಗೊಳ್ಳಲಾಗುವುದು, ಈ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರು ಹೇಳಿದರು.

ಈಗಾಗಲೇ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಎನ್ ಡಿ ಆರ್ ಎಫ್ ತಂಡಗಳು ಭೇಟಿ ನೀಡಿ (ಮೊದಲ ಪುಟದಿಂದ) ಉಂಟಾಗದAತೆ ಹೆಚ್ಚಿನ ನಿಗಾವಹಿಸಬೇಕೆಂದು ನಿರ್ದೇಶನ ನೀಡಿದರು. ಕಾವೇರಿ ಮತ್ತು ಹಾರಂಗಿ ನದಿ ಪಾತ್ರದ ಜನತೆಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ವಹಿಸುವಂತೆ ಅವರು ಹೇಳಿದರು.

ಭೂ ಪರಿವರ್ತನೆಗೆ ನಿರ್ಬಂಧ

ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಈಗಾಗಲೇ ನಿರ್ಬಂಧ ಹೇರಲಾಗಿದೆ. ಈ ಸಂಬAಧ ಕಳೆದ ಬಾರಿ ವಿಶೇಷ ಸಮಿತಿ ಒಂದು ಕೊಡಗು ಜಿಲ್ಲೆಯ ಭೂಕುಸಿತ ಜಾಗಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಭೂ ಪರಿವರ್ತನೆ ಸಂಪೂರ್ಣ ಸ್ಥಗಿತಗೊಳಿಸಲು ಸರ್ಕಾರ ಆದೇಶ ನೀಡಿದೆ ಎಂದು ಸಚಿವರು ಹೇಳಿದರು.

ಒತ್ತುವರಿ ಜಾಗ ಭೋಗ್ಯಕ್ಕೆ

ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಚಿಕ್ಕಮಗಳೂರು, ಹಾಸನ ವ್ಯಾಪ್ತಿಯಲ್ಲಿ ಕಾಫಿ ತೋಟ ಒತ್ತುವರಿ ಮಾಡಿದ ಲಕ್ಷಾಂತರ ಎಕರೆ ಪ್ರದೇಶಗಳನ್ನು ಮೂವತ್ತು ವರ್ಷದ ಅವಧಿಗೆ ಭೋಗ್ಯಕ್ಕೆ ನೀಡುವ ಕ್ರಾಂತಿಕಾರಿ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಕೊಡಗು ಜಿಲ್ಲೆಯ ಕಾಫಿ, ಏಲಕ್ಕಿ ರಬ್ಬರ್ ತೋಟಗಳು ಸೇರಿದಂತೆ ಅಂದಾಜು ೯ ಲಕ್ಷ ಹೆಕ್ಟೇರ್ ಜಾಗದ ಫಲಾನುಭವಿಗಳು ಇದಕ್ಕೆ ಒಳಪಡುತ್ತಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ೨೦ ಸಾವಿರ ಹೆಕ್ಟೇರ್ ಸೇರಿದಂತೆ ಹಾಸನ ಜಿಲ್ಲೆಗಳ ರೈತರಿಗೆ ಇದು ಸಹಕಾರಿಯಾಗಲಿದೆ ಎಂದರು.

ನದಿ, ಕೆರೆ ಮತ್ತಿತರ ಜಾಗಗಳ ಒತ್ತುವರಿಯನ್ನು ತೆರವುಗೊಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಲಿದೆ. ಈ ಸಂಬAಧ ಸಂಬAಧಿಸಿದ ಇಲಾಖೆಗಳು ಸರ್ವೆ ಕಾರ್ಯ ನಡೆಸಿದೆ, ವರದಿ ಸರಕಾರಕ್ಕೆ ಸಲ್ಲಿಸಿರುವುದಾಗಿ ತಿಳಿಸಿದರು. ಪಟ್ಟಣ ವ್ಯಾಪ್ತಿ ಸೇರಿದಂತೆ ಆಯ್ದ ಪ್ರದೇಶಗಳಲ್ಲಿ ತೆರವುಗೊಳಿಸಿದ ಒತ್ತುವರಿ ಜಾಗಗಳನ್ನು ಸರ್ಕಾರ ಸಾರ್ವಜನಿಕ ಉಪಯೋಗಕ್ಕೆ ಮೀಸಲಿರಿಸಿರುವದಾಗಿ ಸಚಿವರು ಹೇಳಿದರಲ್ಲದೆ ಉಳಿದಂತೆ ಹೊರ ವರ್ತುಲದ ಜಾಗಗಳನ್ನ ಉಚಿತ ನಿವೇಶನ ಮತ್ತು ಪರಿಶಿಷ್ಟ, ಮತ್ತಿತರ ಪಂಗಡಗಳಿಗೆ ಅಂತಹ ಜಾಗವನ್ನು ನೀಡುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದರು.

ಕಳೆದ ಹಲವಾರು ವರ್ಷಗಳಿಂದ ಕುಶಾಲನಗರ ಪಟ್ಟಣ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಪ್ರವಾಹ ನಿಯಂತ್ರಣ ಹಿನ್ನೆಲೆಯಲ್ಲಿ ಶಾಶ್ವತ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಈ ಬಗ್ಗೆ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಒಂದು ಸಾವಿರಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು ಈ ಸಂಬAಧ ಸ್ಥಳಕ್ಕೆ ವಿದ್ಯುತ್ ಸಚಿವರು ಕೂಡ ಭೇಟಿ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ಅತಿವೃಷ್ಟಿಯಿಂದ ಹಾನಿಯಾದ ರಸ್ತೆಗಳಿಗೆ ಆದಷ್ಟು ಬೇಗ ಕಾಯಕಲ್ಪ ಕಲ್ಪಿಸುವ ಬಗ್ಗೆ ಭರವಸೆ ವ್ಯಕ್ತಪಡಿಸಿದ ಸಚಿವ ಅಶೋಕ; ಕೊಡಗು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಮುಖಾಂತರ ಮಾಹಿತಿ ಒದಗಿಸಿದರು.

ಜಿಲ್ಲೆಯ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ. ಸತೀಶ್ ಮತ್ತು ಅಧಿಕಾರಿಗಳೊಂದಿಗೆ ಆರ್. ಅಶೋಕ್ ಸಂಪೂರ್ಣ ಮಾಹಿತಿ ಪಡೆದರು. ಈ ಸಂದರ್ಭ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಕಂದಾಯ ಅಧಿಕಾರಿಗಳು ಇದ್ದರು. ಮಡಿಕೇರಿಗೆ ತೆರಳುವ ಮಾರ್ಗದ ಮಧ್ಯೆ ಕಣಿವೆಯ ರಾಮಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವರು ನಂತರ ತುಂಬಿ ಹರಿಯುವ ಕಾವೇರಿಯನ್ನು ಕಣಿವೆ ತೂಗು ಸೇತುವೆ ಮೇಲಿಂದ ವೀಕ್ಷಿಸಿದರು.

-ಚಂದ್ರಮೋಹನ್,

ಕೆ.ಕೆ. ನಾಗರಾಜ ಶೆಟ್ಟಿ