ಕುಶಾಲನಗರ, ಜು. ೫: ಸಾಧನೆಗಳನ್ನು ಮಾಡುವ ಸಂದರ್ಭ ಅಡ್ಡಿ ಆತಂಕಗಳು ಎದುರಾಗುವುದು. ಸರ್ವೇಸಾಮಾನ್ಯ ವಿಷಯವಾಗಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಸನ ಮತ್ತು ಕೊಡಗು ಶಾಖಾ ಮಠದ ಕಾರ್ಯದರ್ಶಿ ಶಂಭುನಾಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ರೈತ ಸಹಕಾರ ಭವನದಲ್ಲಿ ನಡೆದ ಕುಶಾಲನಗರ ತಾಲೂಕು ಒಕ್ಕಲಿಗರ ನೂತನ ಸಂಘದ ಉದ್ಘಾಟನೆ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಆದಿಚುಂಚನಗಿರಿ ಮಠ ಹಿರಿಯ ಸ್ವಾಮೀಜಿಗಳು ಸಮಾಜಕ್ಕೆ ಅನನ್ಯ ಕೊಡುಗೆ ಹಾಗೂ ಸೇವೆ ಸಲ್ಲಿಸಿದ್ದಾರೆ. ತ್ಯಾಗ ಮತ್ತು ಸೇವೆಗಳು ಸಾರ್ಥಕತೆ ಉಂಟುಮಾಡುತ್ತದೆ. ಸಂಸ್ಥಾನದ ಮೂಲಕ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಲಾಗಿದೆ ಎಂದ ಶ್ರೀಗಳು ಮಹನೀಯರು, ದಾರ್ಶನಿಕರ ಹಾದಿಯಲ್ಲಿ ಮನುಕುಲ ಸಾಗಬೇಕಿದೆ ಎಂದು ಸಲಹೆ ನೀಡಿದರು.
ದೂರದೃಷ್ಟಿ ಚಿಂತನೆಗಳ ಮೂಲಕ ಕೆಂಪೇಗೌಡರು ಬೆಂಗಳೂರನ್ನು ಅಂರ್ರಾಷ್ಟಿçÃಯ ಮಟ್ಟಕ್ಕೆ ಖ್ಯಾತಿಗೊಳಿಸಿದರು. ಪ್ರತಿ ಧರ್ಮ, ಸಮುದಾಯಕ್ಕೆ ತನ್ನದೇ ಆದ ಇತಿಹಾಸವಿರುತ್ತದೆ. ಅಂತಹ ಇತಿಹಾಸಗಳು ಭವಿಷ್ಯದ ಪೀಳಿಗೆಗಳಿಗೆ ಮಾರ್ಗದರ್ಶನ ನೀಡಲು ಸಹಕಾರಿಯಾಗಲಿದೆ ಎಂದರು.
ನೂತನವಾಗಿ ಉದ್ಘಾಟನೆಗೊಂಡಿ ರುವ ಕುಶಾಲನಗರ ಒಕ್ಕಲಿಗರ ಸಂಘ ಆರೋಗ್ಯ ಮೇಳದಂತಹ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತಾಗಬೇಕು ಎಂದರು. ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ವನ್ನು ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಎಸ್.ಎಂ.ಚAಗಪ್ಪ ಉದ್ಘಾಟಿಸಿದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಉಪನ್ಯಾಸಕ ಹಂಡ್ರAಗಿ ನಾಗರಾಜ್, ಕೆಂಪೇಗೌಡರ ಸಾಧನೆ, ಕೊಡುಗೆ, ಇತಿಹಾಸದ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರಮುಖರನ್ನು ಗೌರವಿಸಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ, ಮಡಿಕೇರಿ ತಾಲೂಕು ಅಧ್ಯಕ್ಷರುಗಳಾದ ಎ.ಆರ್.ಮುತ್ತಣ್ಣ, ವಿ.ಜಿ.ಮೋಹನ್ ಸೇರಿದಂತೆ ಸಂಘದ ಕಾರ್ಯದರ್ಶಿ ಎಂ.ಎA.ಪ್ರಕಾಶ್, ನಿರ್ದೇಶಕರುಗಳು ಇದ್ದರು. ಚೇತನ್ ಸ್ವಾಗತಿಸಿದರು. ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರೆ, ಸಿ.ವಿ. ನಾಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.