ನಾಪೋಕ್ಲು, ಜು. ೬: ಸಮೀಪದ ಎಮ್ಮೆಮಾಡು ಗ್ರಾಮದ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಎಮ್ಮೆಮಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಯಿಷ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷಿö್ಮ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೀಲಾ, ಎಮ್ಮೆಮಾಡು ಗ್ರಾಮ ಪಂಚಾಯಿತಿ ಪಿಡಿಒ ಚೋಂದಕ್ಕಿ, ಸದಸ್ಯರಾದ ಯೂಸುಫ್, ಗಫೂರ್, ನಝೀರ್, ಎಮ್ಮೆಮಾಡು ಸರ್ಕಾರಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಕರೀಂ, ಪಡಿಯಾಣಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಧಮೇಂದ್ರ, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ಕವಿತ ಪ್ರಾರ್ಥಿಸಿದರು. ಅಂಗನವಾಡಿ ಕಾರ್ಯಕರ್ತೆ ಪವಿತ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.