ಮಡಿಕೇರಿ, ಜು. ೬: ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಜಿಲ್ಲೆಗೆ ಭೇಟಿ ನೀಡಿದ್ದು, ತಾ. ೭ರಂದು (ಇಂದು) ಭೂಕಂಪನ - ಭೂಕುಸಿತ ಆಗಿರುವ ಪ್ರದೇಶಗಳಿಗೆ ತೆರಳಿ ವೀಕ್ಷಣೆ ಮಾಡಲಿದ್ದಾರೆ.
ಬೆಳಿಗ್ಗೆ ೧೦.೩೦ಕ್ಕೆ ಸಂಪಾಜೆ ರಾಷ್ಟಿçÃಯ ಹೆದ್ದಾರಿಯಲ್ಲಿನ ಭೂಕುಸಿತ ಪ್ರದೇಶದ ವೀಕ್ಷಣೆ, ೧೧.೧೫ಕ್ಕೆ ಚೆಂಬು ಭೇಟಿ, ಗ್ರಾಮಸ್ಥರೊಂದಿಗೆ ಚರ್ಚೆ, ಭೂಕಂಪನ ಮಾಪನ ಅಳವಡಿಸಿರುವ ಶಾಲೆಗೆ ಭೇಟಿ, ಭೂಕಂಪನದ ಬಗ್ಗೆ ಪರಿಶೀಲಿಸಲು ಆಗಮಿಸಿರುವ ವೈಜ್ಞಾನಿಕ ಸಮಿತಿಯೊಂದಿಗೆ ಚರ್ಚೆ ಮಾಡಲಿದ್ದಾರೆ. ನಂತರ ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು, ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್. ಪ್ರಶಾಂತ್ ತಿಳಿಸಿದ್ದಾರೆ.