ಮಡಿಕೇರಿ, ಜು. ೬: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ, ವತಿಯಿಂದ ಸ್ಟೋನ್ಹಿಲ್ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನದಡಿ ಸಮುದಾಯ ಆಧಾರಿತ ಚಟುವಟಿಕೆಯಲ್ಲಿ ಸುಪೋಷಣ್ ದಿವಸ ಕಾರ್ಯಕ್ರಮ ಹಾಗೂ ಪೌಷ್ಠಿಕತೆಯಲ್ಲಿ ಅಭಿವೃದ್ಧಿ, ಹಸಿವು ಮುಕ್ತ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಸ್ವಚ್ಛ ನೀರು ಮತ್ತು ನೈರ್ಮಲ್ಯದ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಮೇಲ್ವಿಚಾರಕಿ ಸವಿತಾ ಸಿ.ಪಿ. ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸುಪೋಷಣ್ ದಿವಸ್ನ ಅಂಗವಾಗಿ ಆರೋಗ್ಯ, ಪೌಷ್ಟಿಕಯುಕ್ತ ಆಹಾರ ಮತ್ತು ತೂಕದ ಮಹತ್ವ ಬಗ್ಗೆ ಲಿಂಗ ಸಮಾನತೆಯ ಬಗ್ಗೆ ಮಾಹಿತಿ ನೀಡಿ, ಮಹಿಳಾ ಮತ್ತು ಮಕ್ಕಳ ಸಹಾಯವಾಣಿ, ಉದ್ಯೋಗಿನಿ ಯೋಜನೆಯ ಬಗ್ಗೆ, ನೀರು ಮತ್ತು ನೈರ್ಮಲ್ಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ದರು. ಪೋಷಣ್ ಅಭಿಯಾನ ಯೋಜನೆಯ ಜಿಲ್ಲಾ ಸಂಯೋಜಕರಾದ ನಿತಿನ್ ರವರು ರಕ್ತ ಹೀನತೆ ತಡೆಗಟ್ಟುವಲ್ಲಿ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿಸಿದರು. ಮಾತೃ ವಂದನಾ ಯೋಜನೆಯ ಜಿಲ್ಲಾ ಸಂಯೋಜಕರಾದ ನೈನಾ ರವರು ಮಾತೃ ವಂದನಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪೋಷಣ್ ಅಭಿಯಾನ ಹಾಗೂ ಮಾತೃ ವಂದನಾ ಯೋಜನೆಯ ಸಿಬ್ಬಂದಿಗಳಾದ ಕಾವ್ಯ, ಚೈತ್ರ, ಅಂಗನವಾಡಿ ಕಾರ್ಯಕರ್ತೆಯ ರಾದ ನಾಗರತ್ನ, ಬಬಿತ, ವೀಣಾ ಮತ್ತು ನೀತು ಹಾಗೂ ಫಲಾನುಭವಿಗಳು ಹಾಜರಿದ್ದರು. ಹೀರತ್ನೀಸಾ ಸ್ವಾಗತಿಸಿ, ಸುಗುಣ ವಂದಿಸಿದರು.