ಮಡಿಕೇರಿ, ಜು. ೬: ನಿರಂತರ ಮಳೆಯಿಂದ ಹದಗೆಟ್ಟ ಗಾಳಿಬೀಡು ಮುಖ್ಯ ರಸ್ತೆ ಕೆರೆಯಂತಾಗಿದೆ. ಪಾದಚಾರಿಗಳು ಹಾಗೂ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹಿನ್ನೆಲೆ, ಸ್ಥಳೀಯ ಸ್ನೇಹಿತರ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಿದರು.

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ಮತ್ತು ರಸ್ತೆಯನ್ನು ದುರಸ್ತಿ ಪಡಿಸದೆ ಇರುವುದೇ ಈ ದುಸ್ಥಿತಿಗೆ ಕಾರಣವಾಗಿದೆ. ಮೋರಿಗಳಿದ್ದರೂ ಪ್ರಯೋಜನಕ್ಕೆ ಬಾರದ ಸ್ಥಿತಿಯಲ್ಲಿದೆ. ಆಡಳಿತ ವ್ಯವಸ್ಥೆಯ ನಿರ್ಲಕ್ಷö್ಯದಿಂದ ಪ್ರತಿವರ್ಷ ಮಳೆಗಾಲದಲ್ಲಿ ಗ್ರಾಮಸ್ಥರು ಸಂಕಷ್ಟವನ್ನು ಎದುರಿಸುವಂತಾಗಿದೆ. ಗ್ರಾ.ಪಂ ಸದಸ್ಯರು ಗ್ರಾಮಸ್ಥರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆAದು ಸಂಘದ ಪ್ರಮುಖರು ಆರೋಪಿಸಿದರು.

ಅತೀ ಹೆಚ್ಚು ಮಳೆಯಾಗುವ ಮತ್ತು ಭೂ ಕುಸಿತ ಸಂಭವಿಸುವ ಈ ಪ್ರದೇಶವನ್ನು ಜನಪ್ರತಿನಿಧಿಗಳು ಕಡೆಗಣಿಸಬಾರದು. ಇನ್ನಾದರು ಎಚ್ಚೆತ್ತುಕೊಂಡು ರಸ್ತೆ, ಚರಂಡಿ ಮತ್ತು ಮೋರಿಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ ಸದಸ್ಯರು, ತಪ್ಪಿದಲ್ಲಿ ತೀವ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ಯುವಕ ಸಂಘದ ಅಧ್ಯಕ್ಷ ಕೆ.ಮೋಹನ್, ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.