ಗೋಣಿಕೊಪ್ಪಲು, ಜು. ೮: ಶ್ರೀಮಂಗಲ ಹೋಬಳಿಯ ಕುಮಟೂರು ಗ್ರಾಮದ ಸುತ್ತಮುತ್ತಲಿನ ರೈತರ ಕಾಫಿ ತೋಟದಲ್ಲಿ ಕಾಡಾನೆಗಳು ಉಪಟಳ ನೀಡುತ್ತಿದ್ದು ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯ ತಾ. ೯ ರಂದು (ಇಂದು) ನಡೆಯಲಿದೆ.

ಸಾರ್ವಜನಿಕರು, ಕಾರ್ಮಿಕರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರುವಂತೆ ಪೊನ್ನಂಪೇಟೆ ವಲಯ ಅರಣ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.