ಮಡಿಕೇರಿ, ಜು. 7: ಕೃಷ್ಣರಾಜಸಾಗರ, ಹಾರಂಗಿ, ಕಬಿನಿ ಮತ್ತು ಚಿಕ್ಕಹೊಳೆ ಅಣೆಕಟ್ಟೆಗಳ ನದಿ ಪಾತ್ರದಲ್ಲಿ ಪ್ರವಾಹ ಸಂದರ್ಭ ಉಂಟಾಗಬಹುದಾದ ಪ್ರತಿಕೂಲ ಪರಿಣಾಮಗಳ ನಿರ್ವಹಣೆಯ ಕುರಿತು ಪಾಲುದಾರರ ಪಾತ್ರದ ಬಗ್ಗೆ ಅರಿವು ಮೂಡಿಸುವ ವಿಚಾರಗೋಷ್ಠಿ ತಾ. 8 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕೆಆರ್ಎಸ್ ಮೈಸೂರು ರಸ್ತೆಯ ಮೊಗರಹಳ್ಳಿ (ಮಂಟಿ) ಕುಸುಮ-ಚಂದ್ರಶೇಖರ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ, ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ, ರೇಷ್ಮೆ, ಯುವಜನ ಸಬಲೀಕರಣ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಉನ್ನತ ಶಿಕ್ಷಣ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ತಂತ್ರಜ್ಞಾನ, ಕೌಶಲ್ಯಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಗಳ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ್, ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್, ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ, ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ. ನಾಗೇಶ್, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಹೆಚ್.ಡಿ. ಕುಮಾರಸ್ವಾಮಿ, ಸಂಸದ ಪ್ರತಾಪ ಸಿಂಹ, ಸುಮಲತಾ ಅಂಬರೀಶ್, ಬಿ.ಎನ್. ಬಚ್ಚೇಗೌಡ, ಶ್ರೀನಿವಾಸ್ ಪ್ರಸಾದ್, ಡಿ.ಕೆ. ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕ ಡಿ.ಕೆ. ಶಿವಕುಮಾರ್, ತನ್ವೀರ್ ಸೇಠ್, ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸಾ.ರಾ. ಮಹೇಶ್, ಮರಿತಿಬ್ಬೇಗೌಡ, ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಜಿ.ಟಿ. ದೇವೇಗೌಡ, ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಎಸ್.ಎ. ರಾಮದಾಸ್, ಎ.ಟಿ. ರಾಮಸ್ವಾಮಿ, ಎಂ. ಶ್ರೀನಿವಾಸ್, ಕೆ. ಸುರೇಶ್ ಗೌಡ, ಡಾ. ಕೆ. ಅನ್ನದಾನಿ, ಎ. ಮಂಜುನಾಥ್, ಅನಿತಾ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್, ಸಿ.ಎಂ. ಲಿಂಗಪ್ಪ, ಎಸ್.ರವಿ, ಪುಟ್ಟಣ್ಣ, ಅ. ದೇವೇಗೌಡ, ಎನ್. ಮಹೇಶ್, ಕೆ. ಮಹದೇವ್, ಎಲ್. ನಾಗೇಂದ್ರ, ಬಿ. ಹರ್ಷವರ್ಧನ್, ಸಿ.ಎಸ್. ನಿರಂಜನ್ ಕುಮಾರ್, ಡಾ. ಯತೀಂದ್ರ ಎಸ್, ಅಶ್ವಿನ್ ಕುಮಾರ್ ಎಂ., ಅನಿಲ್ ಕುಮಾರ್ ಸಿ., ಹೆಚ್.ಪಿ. ಮಂಜುನಾಥ್, ಅಡಗೂರು ಹೆಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸುಜಾ ಕುಶಾಲಪ್ಪ, ಸಿ.ಎನ್. ಮಂಜೇಗೌಡ, ದಿನೇಶ್ ಗೂಳಿಗೌಡ, ಡಾ. ಸೂರಜ್ ರೇವಣ್ಣ, ಆಯನೂರು ಮಂಜುನಾಥ್, ಮಧು ಜಿ. ಮಾದೇಗೌಡ, ಕಾವೇರಿ ಜಲಾನಯನ ಯೋಜನೆಯ ಅಧ್ಯಕ್ಷ ಶಿವಲಿಂಗಯ್ಯ, ಕೃಷ್ಣರಾಜಸಾಗರ ಗ್ರಾ.ಪಂ. ಅಧ್ಯಕ್ಷ ಕೆ. ನರಸಿಂಹ, ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಆಯುಕ್ತರು, ಇತರರು ಪಾಲ್ಗೊಳ್ಳಲಿದ್ದಾರೆ.