ಚೆಯ್ಯಂಡಾಣೆ, ಜು. ೮: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಂಗಣದಲ್ಲಿ ವೀರಾಜಪೇಟೆ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಆಚರಿಸಲಾಯಿತು.

ಸರಕಾರಿ ಪ್ರಾಥಮಿಕ ಶಾಲಾ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮ ವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಈರಪ್ಪ ಗಿಡ ನೆಡುವುದರ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ಭರತ್ ಉತ್ತಪ್ಪ ಗಿಡ ನೆಟ್ಟು ಚಾಲನೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಮೀನಾ, ವಲಯ ಅರಣ್ಯಾಧಿಕಾರಿ ದೇವಯ್ಯ, ಮೋನಿಷಾ, ಆನಂದ್, ನಾಗರಾಜು ಹಾಗೂ ಸಿಬ್ಬಂದಿಗಳು ಮತ್ತು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.