ಮಡಿಕೇರಿ, ಜು. ೮: ಭಾರೀ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಸಮಸ್ಯೆ ಉಂಟಾಗುತ್ತಿದ್ದು, ಅದಕ್ಕೆ ತಕ್ಷಣ ಸ್ಪಂದನ ನೀಡಲಾಗುವುದು ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದರು.

ಜಿಲ್ಲಾಡಳಿತ ಭವನ ಎದುರಿನ ತಡೆಗೋಡೆ ಹಾಗೂ ಮಡಿಕೇರಿ-ಮಂಗಳೂರು ಹೆದ್ದಾರಿ ನಡುವೆ ಬರೆ ಜರಿದಿರುವ ಕರ್ತೋಜಿಗೆ ಭೇಟಿ ನೀಡಿದ ಸಂಸದರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಕಡೆಗಳಲ್ಲಿ ಮಳೆಯಿಂದ ರಸ್ತೆಗಳಿಗೆ ಹಾನಿಯಾಗಿವೆ. ಮಡಿಕೇರಿ-ಮಂಗಳೂರು ನಡುವಿನ ಹೆದ್ದಾರಿಯಲ್ಲಿ ಅಲ್ಲಲ್ಲಿ ಬರೆ ಕುಸಿದಿದೆ. ಕೇಂದ್ರ ಸರಕಾರದ ಮೂಲಕ ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದ ಅವರು, ಜಿಲ್ಲಾಡಳಿತ ಭವನ ಎದುರು ನಿರ್ಮಿಸಿರುವ ತಡೆಗೋಡೆ ಕಾಮಗಾರಿಯ ಪುನರ್ ಪರಿಶೀಲನೆ ಮಾಡಬೇಕಾಗಿದೆ. ಮಳೆ ಹಿನ್ನೆಲೆ ಆ ಸಂಬAಧ ದಿಢೀರ್ ಕ್ರಮಕೈಗೊಳ್ಳಲು ಆಗುತ್ತಿಲ್ಲ. ತಡೆಗೋಡೆಯಲ್ಲಿ ನೀರು ತುಂಬಿದ ಹಿನ್ನೆಲೆ ಸಮಸ್ಯೆಯಾಗಿದೆ ಎಂದು ಹೇಳಿದರು.

ಭೇಟಿ ಸಂದರ್ಭ ಶಾಸಕ ಕೆ.ಜಿ. ಬೋಪಯ್ಯ, ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ ಸೇರಿದಂತೆ ಇನ್ನಿತರರು ಇದ್ದರು.