ಚೆಯ್ಯಂಡಾಣೆ, ಜು. ೮: ಕದನೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಅರಮೇರಿ, ಮೈತಾಡಿ, ಚಾಮಿಯಾಲ ಗ್ರಾಮಗಳಲ್ಲಿ ಕಾಡಾನೆ ನಿರಂತರ ದಾಳಿ ನಡೆಸುತ್ತಿದ್ದು, ಫಸಲನ್ನು ನಾಶಪಡಿಸಿ ತೋಟಗಳಲ್ಲಿ ದಾಂಧÀಲೆ ನಡೆಸುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ ಕಾಫಿ, ಅಡಿಕೆ, ಬಾಳೆ, ಕರಿಮೆಣಸು ಗಿಡಗಳನ್ನು ಹಾನಿಪಡಿಸಿದ್ದು ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಸ್ಥ ಶಾದುಲಿ ಮಾತನಾಡಿ, ಈ ಭಾಗದಲ್ಲಿ ಕಾಡಾನೆ ನಿರಂತರ ದಾಳಿ ನಡೆಸುತ್ತಿದ್ದು, ಅಪಾರ ಹಾನಿ ಸಂಭವಿಸಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಷ್ಟ ಅನುಭವಿಸಿದ್ದು, ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಜೆಡಿಎಸ್ ವೀರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಸೈಪುದ್ದಿನ್ ಮಾತನಾಡಿ, ಚಾಮಿಯಾಲ ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಅರಣ್ಯ ಇಲಾಖೆ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊAಡು ಕಾಡಾನೆ ಗ್ರಾಮಕ್ಕೆ ನುಸುಳದ ರೀತಿಯಲ್ಲಿ ಕ್ರಮಕೈಗೊಂಡು, ನಷ್ಟ ಅನುಭವಿಸಿದ ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಇದಕ್ಕೆ ಅರಣ್ಯ ಇಲಾಖೆ ಸ್ಪಂದಿಸದಿದ್ದರೆ ಸ್ಥಳೀಯರ ನೆರವಿನಿಂದ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
- ವರದಿ: ಅಶ್ರಫ್