ಚೆಟ್ಟಳ್ಳಿ, ಜು. ೮: ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿದ್ದ ಸುಂಟಿಕೊಪ್ಪ ಸ್ವಸ್ಥ ಸಂಸ್ಥೆಯ ಸಂಯೋಜಕÀ ಎಸ್. ಮರುಗೇಶ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದೊಂದಿಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದರು.
ಮತ್ತೋರ್ವ ಅತಿಥಿ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ವಸಂತ್ ರೈ ಮಾತನಾಡಿ, ಪ್ರಸ್ತುತ ತಾನು ವಿದ್ಯುತ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಈ ಶಾಲೆಯಲ್ಲಿ ಕಲಿತ ವಿದ್ಯೆಯ ಫಲವೇ ಕಾರಣವೆಂದರು. ಶಾಲಾ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಜೆ.ಸಿ. ಸತ್ಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ವಿದ್ಯಾರ್ಥಿ ನಾಯಕರು ಪ್ರಮಾಣ ವಚನ ಸ್ವೀಕರಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.