ನಾಪೋಕ್ಲು, ಜು. ೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಮೇಶ್ವರಿ ಜ್ಞಾನವಿಕಾಸ ಕೇಂದ್ರವನ್ನು ಭಗವತಿ ದೇವಾಲಯದ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು.

ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಭಾಗಮಂಡಲ ವಲಯದ ನಾಪೋಕ್ಲು ಸುಭಾಷ್ ನಗರ ಒಕ್ಕೂಟ ವ್ಯಾಪ್ತಿಯಲ್ಲಿ ಪರಮೇಶ್ವರಿ ನೂತನ ಜ್ಞಾನವಿಕಾಸ ಕೇಂದ್ರವನ್ನು ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಉದ್ಘಾಟಿಸಿದರು. ಕೆಡಿಪಿ ಸದಸ್ಯ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ವಲಯ ಮೇಲ್ವಿಚಾರಕ ಸಂತೋಷ್ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ವೇತ ಸೇವಾ ಪ್ರತಿನಿಧಿಗಳಾದ ರಮ್ಯ, ಉಮಾಲಕ್ಷಿö್ಮ, ಗೀತಾ, ಸೆಲ್ಕೋ ಸೋಲಾರ್ ಗಣೇಶ್ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.