ಮಡಿಕೇರಿ, ಜು. 7: ಶೈಕ್ಷಣಿಕವಾಗಿ ಸಾಧನೆ ಮಾಡಿದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಒಂದನೇ ತರಗತಿಯಿಂದ ಮೇಲ್ಪಟ್ಟ ಎಲ್ಲಾ ಹಂತದ ಶಿಕ್ಷಣದಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಹಾಗೂ ಸ್ವವಿವರವನ್ನು ತಾ. 10 ರೊಳಗೆ ವಾಟ್ಸಪ್ ಸಂಖ್ಯೆ +91 9482982228 ಸಂಖ್ಯೆಗೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.