ಮಡಿಕೇರಿ, ಜು. ೮: ಕಾವೇರಿ ಮಾತೆ ಹಾಗೂ ಕೊಡವರÀ ವಿರುದ್ಧ ಅವಹೇಳನಕಾರಿ ಅಂಶವನ್ನು ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಮಾಡಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಗೊಂಡಿದೆ. ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕೊಡಗಿನಿಂದ ಗಡಿಪಾರು ಮಾಡುವಂತೆ ಒತ್ತಾಯಿಸಲಾಗಿದೆ; ಅಲ್ಲದೆ ಪ್ರತಿಭಟನೆ ಎಚ್ಚರಿಕೆಯನ್ನೂ ನೀಡಲಾಗಿದೆ.

ಬಿಜೆಪಿ ಕಾನೂನು ಪ್ರಕೋಷ್ಠ

ಭಾರತೀಯ ಜನತಾ ಪಕ್ಷದ ಕಾನೂನು ಪ್ರಕೋಷ್ಠದ ವೀರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಬಿ.ಎನ್. ಜಗದೀಶ್ ವೀರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದೇ ವಿಚಾರದಲ್ಲಿ ಹಲವಾರು ಸಂಘ-ಸAಸ್ಥೆಗಳು ಆತನ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈತ ಇದಕ್ಕೆ ಬಿಜೆಪಿಯರ ಕುಮ್ಮಕ್ಕು ಕಾರಣ ಎಂದು ಮತ್ತೆ ಜಾಲತಾಣದಲ್ಲಿ ಹೇಳಿರುವುದು ಸತ್ಯಕ್ಕೆ ದೂರವಾಗಿದೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುತ್ತದೆ. ತಕ್ಷಣ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಕೊಡಗು ಬಂದ್ ಕರೆ ನೀಡುವುದು ಅನಿವಾರ್ಯ ಎಂದು ಅವರು ಎಚ್ಚರಿಸಿದ್ದಾರೆ.

ಪೊಲೀಸ್ ಇಲಾಖೆ ಸೂಕ್ತ ಕಠಿಣ ಕ್ರಮ ಕೈಗೊಂಡು ಕೊಡಗಿನ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಆಗ್ರಹಿಸಿದರು. ಇದೇ ಸಂದರ್ಭ ಬಿಜೆಪಿ ಕಾನೂನು ಪ್ರಕೋಷ್ಠದ ಎ.ಆರ್. ರಂಜನ್, ಸಿ.ಕೆ. ಪೊನ್ನಣ್ಣ, ದರ್ಶನ್ ಕುಮಾರ್, ಬಿ.ಎಂ. ದಿನೇಶ್, ರೀನಾ ಪ್ರಕಾಶ್, ಪಿ.ಎ. ಪೊನ್ನಣ್ಣ ಉಪಸ್ಥಿತರಿದ್ದರು.

ಪ್ರತಿಭಟನೆಯ ಎಚ್ಚರಿಕೆ

ಶ್ರೀಮಂಗಲ : ದುಷ್ಕರ್ಮಿಯ ಮೇಲೆ ಕೊಡಗಿನ ಹಲವು ಪೊಲೀಸ್ ಠಾಣೆಗಳಲ್ಲಿ ಪುಕಾರುಗಳು ದಾಖಲಾಗಿದ್ದು, ಈ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೊಡಗು ಸಂರಕ್ಷಣಾ ವೇದಿಕೆ ಪ್ರಮುಖರು ಆಗ್ರಹಿಸಿದ್ದಾರೆ.

ತಾ. ೧೦ ರೊಳಗೆ ಈತನನ್ನು ಬಂಧಿಸಲು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ದಕ್ಷಿಣ ಕೊಡಗಿನ ಎಲ್ಲಾ ಸಂಘ-ಸAಸ್ಥೆಗಳ ಸಹಕಾರದಿಂದ ತಾ. ೧೩ ರಂದು ವೀರಾಜಪೇಟೆಯ ಡಿ.ವೈ.ಎಸ್.ಪಿ. ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕೊಡಗು ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಚೊಟ್ಟೆಕ್‌ಮಾಡ ರಾಜೀವ್ ಬೋಪಯ್ಯ, ಪ್ರಮುಖರಾದ ಮಚ್ಚಮಾಡ ಅನೀಶ್ ಮಾದಪ್ಪ, ಮಲ್ಲಮಾಡ ಪ್ರಭು ಪೂಣಚ್ಚ, ಅಣ್ಣೀರ ಹರೀಶ್ ಮಾದಪ್ಪ ಹಾಜರಿದ್ದರು.

ಯುವ ಕಾಂಗ್ರೆಸ್

ಅವಹೇಳನಕಾರಿ ಸಂದೇಶ ಹರಿಬಿಟ್ಟ ವ್ಯಕ್ತಿಯ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷ ನಾಮೇರ ಅಂಕಿತ್ ಪೊನ್ನಪ್ಪ ಆಗ್ರಹಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಆಗ್ರಹಿಸಿದ್ದಾರೆ. ಕೊಡಗಿನಲ್ಲಿ ಇದ್ದು ಇಲ್ಲಿನ ನೀರು - ಗಾಳಿ ಸೇವಿಸಿ ಇಂತಹ ಕ್ಷÄಲ್ಲಕ ಹೇಳಿಕೆ ನೀಡುವ ಯಾರೇ ಆಗಲಿ ಜಿಲ್ಲೆಯಲ್ಲಿ ಇರಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಹಿಂದೂ ಯುವ ಸೇನೆ

ಅವಹೇಳನಕಾರಿ ಹೇಳಿಕೆ ಹಾಕಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಸೂಕ್ತ ಕ್ರಮ ಜರುಗಿಸುವಂತೆ ಕೊಡಗು ಯುವ ಸೇನೆಯ ಜಿಲ್ಲಾ ಉಪಾಧ್ಯಕ್ಷ ಹಾಗೂ ಹಿಂದೂ ಯುವ ವಾಹನಿಯ ಜಿಲ್ಲಾ ಪ್ರಮುಖ ಪೊನ್ನೇಟಿ ವೇಣು (ಅರುಣ್‌ಗೌಡ) ಆಗ್ರಹಿಸಿದ್ದಾರೆ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ ಅವರು ಜನಾಂಗೀಯ ನಿಂದನೆ ಬಗ್ಗೆ ಆಕ್ಷೇಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಮಾಜದ ಸ್ವಾಸ್ಥö್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ ಎಂದಿದ್ದಾರೆ.

ಗಡಿಪಾರಿಗೆ ಆಗ್ರಹ

ಕೊಡಗಿನ ಕುಲಮಾತೆ ಕಾವೇರಿ ಹಾಗೂ ಕೊಡವ ಯುವತಿಯರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಯುವಕನ ವಿರುದ್ಧ ಕ್ರಮ ಕ್ರಮಕೈಗೊಳ್ಳುವುದರೊಂದಿಗೆ ಆತನನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಕಾಂಗ್ರೆಸ್ ಮುಖಂಡ ಕದ್ದಣಿಯಂಡ ಹರೀಶ್ ಬೋಪಣ್ಣ ಒತ್ತಾಯಿಸಿದ್ದಾರೆ.