ಮಡಿಕೇರಿ, ಜು. ೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಮಡಿಕೇರಿ, ಜು. ೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್ ನೆರವೇರಿಸಿ ಮಾತನಾಡಿ, ಭಾರತದ ಪ್ರಜೆಯಾಗಿ ಕಾನೂನು ಗಳ ಅರಿವು ಪ್ರತಿಯೊಬ್ಬರಲ್ಲಿಯು ಇರಬೇಕು ಎಂದು ಕರೆ ನೀಡಿದರು.

ಮಾದಕ ವಸ್ತುಗಳ ದುರ್ಬಳಕೆ ತಡೆಗಟ್ಟಲು ಎಲ್ಲರೂ ಕೈ ಜೋಡಿಸೋಣ ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಗೋಪಿನಾಥ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಮೂರ್ನಾಡು ವಿದ್ಯಾಸಂಸ್ಥೆ ಕಾರ್ಯದರ್ಶಿ ವೇಣು ಅಪ್ಪಣ್ಣ ಮುಖ್ಯ ಅತಿಥಿಗಳಾಗಿ ಉಪಸ್ಥಿತ ರಿದ್ದರು. ಡಾ. ಡೇವಿನ್ ಲಿನೇಕರ್ ಕರ್ಕಡ ಮಾದಕ ವಸ್ತುಗ ಳಿಂದಾಗುವ ದುಷ್ಪರಿಣಾಮಗಳು, ಯಾವ ರೀತಿಯಲ್ಲಿ ಮಾದಕ ವಸ್ತುಗಳಿಗೆ ಒಳಗಾಗದೆ ನಾವು ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಉಪನ್ಯಾಸ ನೀಡಿದರು.