ಮಡಿಕೇರಿ, ಜು. ೯: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ತಾ. ೧೧ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತಾ. ೧೧ ರಂದು ಬೆಳಿಗ್ಗೆ ೯ ಗಂಟೆಗೆ ಸೋಮವಾರ ಪೇಟೆಯ ಸರ್ಕಾರಿ ಅತಿಥಿ ಗೃಹದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೆಳಿಗ್ಗೆ ೧೦.೩೦ ಗಂಟೆಗೆ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯುವ ಕನ್ನಡ ಕಾಯಕ ವರ್ಷಾಚರಣೆ ಸಮಾರೋಪ ಸಮಾರಂಭ ‘ನುಡಿ ನುಡಿ- ನುಡಿಯಾನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ೩ ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ ೫ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾ ಘೋಷ್ಠಿ ನಡೆಸಲಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಎನ್. ಮಹೇಶ್ ತಿಳಿಸಿದ್ದಾರೆ.
ಪ್ರಾಧಿಕಾರದ ಕಾರ್ಯದರ್ಶಿ ಪ್ರವಾಸ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ ಅವರು ತಾ. ೧೧ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ. ಕಾರ್ಯದರ್ಶಿಯವರು ತಾ. ೧೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ-ಕನ್ನಡ ಜಾಗೃತಿ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೋಮವಾರಪೇಟೆ ತಾಲೂಕು ಆಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕನ್ನಡ ಕಾಯಕ ವರ್ಷಾಚರಣೆ ಸಮಾರೋಪ ಸಮಾರಂಭದಲ್ಲಿ ‘ನುಡಿನುಡಿ- ನುಡಿಯಾನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅನುಷ್ಟಾನ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಾಖಾಧಿಕಾರಿ ತಿಳಿಸಿದ್ದಾರೆ.