ಮಡಿಕೇರಿ, ಜು. ೯: ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ತೋರ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.ಕಳೆದ ಭೂಕುಸಿತದಿಂದ ೧೦ ಮಂದಿ ಜೀವ ಕಳೆದುಕೊಂಡಿದ್ದ ಸ್ಥಳಕ್ಕೆ ಖುದ್ದು ತೆರಳಿ ಪರಿಶೀಲಿಸಿದರು. ಅಲ್ಲದೆ ಈ ಹಿಂದಿನ ಘಟನೆಯ ಸಂಬAಧ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ಇದೇ ವೇಳೆ ತೋರ ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ವಾಸವಿರುವ ೨೦ ಕುಟುಂಬಗಳ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ಅವರು, ಜನರ ಯೋಗ-ಕ್ಷೇಮ ವಿಚಾರಿಸಿದರು. ಅಲ್ಲದೆ ತಕ್ಷಣವೆ ಬೆಟ್ಟದ ತಪ್ಪಲಿನ ನಿವಾಸಿಗಳನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸುವAತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಕೆದಮುಳ್ಳೂರು ಗ್ರಾ.ಪಂ.ನ ಪುತ್ತಮಕ್ಕಿ ಸ.ಹಿ.ಪ್ರಾ. ಶಾಲೆಯಲ್ಲಿ ಆರಂಭಿಸಿರುವ ಪರಿಹಾರ ಕೇಂದ್ರಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ವೀರಾಜಪೇಟೆ ತಾ.ಪಂ. ಇಒ ಅಪ್ಪಣ್ಣ, ಹೋಬಳಿ ನೋಡಲ್ ಅಧಿಕಾರಿ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮತ್ತು ಇತರರು ಹಾಜರಿದ್ದರು.