ಮಡಿಕೇರಿ, ಜು. ೯: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೧೫ ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನು ವೆಬ್ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಜಿಲ್ಲಾ ಕಚೇರಿ ಮಡಿಕೇರಿ ದೂ. ೦೮೨೭೨-೨೯೫೬೨೮. ಮಡಿಕೇರಿ ತಾಲೂಕು ಕಚೇರಿ ಮೊ. ೮೭೬೨೪೭೬೭೯೦. ವೀರಾಜಪೇಟೆ ತಾಲೂಕು ಕಚೇರಿ ಮೊ. ೯೮೪೪೫೩೧೦೪೦. ಸೋಮವಾರಪೇಟೆ ತಾಲೂಕು ಕಚೇರಿ ಮೊ. ೯೪೮೧೭೭೨೧೪೩ನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಟಿತ ಶಾಲೆಗಳಿಗೆ ದಾಖಲಿಸಲು
ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೧೧ ಕೊನೆಯ ದಿನವಾಗಿದೆ. ೫ನೇ ತರಗತಿಯಲ್ಲಿ ಶೇ. ೬೦ ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ ೬ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಡಿsÃಕರಣ ಪ್ರಮಾಣ ಪತ್ರ, ಆದಾಯ ದೃಡಿsÃಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಡಿsÃಕೃತಗೊಂಡ ಅಂಕಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. ೨ ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).
ಅರ್ಜಿಯನ್ನು ಪಡೆಯಲು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ ದೂ. ೦೮೨೭೨-೨೨೫೫೩೧, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-೦೮೨೭೬-೨೮೧೧೧೫, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-೦೮೨೭೪-೨೪೯೪೭೬ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.
ಕೃಷಿ ಪ್ರಶಸ್ತಿಗೆ
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ೨೦೨೨-೨೩ನೇ ಸಾಲಿಗೆ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ವರ್ಷದಲ್ಲಿ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಮಟ್ಟಗಳಿಗೆ ಅನ್ವಯಿಸುವಂತೆ ಸಾಮಾನ್ಯ ರೈತ/ ರೈತ ಮಹಿಳೆಯರಿಗೆ ರೂ. ೧೦೦, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತ/ ರೈತ ಮಹಿಳೆಯರಿಗೆ ರೂ. ೨೫ ನೋಂದಣಿ ಶುಲ್ಕವಿದೆ.
ಕನಿಷ್ಟ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾಮಟ್ಟಕ್ಕೆ ಸ್ಪರ್ಧಿಸಬಹುದು ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದು. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ ೧೫ ದಿನಗಳ ಮುಂಚಿತವಾಗಿ ಸಂಬAಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸಬೇಕು.
ತಾಲೂಕುಮಟ್ಟ ಪ್ರಥಮ ರೂ. ೧೫ ಸಾವಿರ, ದ್ವಿತೀಯ ರೂ. ೧೦ ಸಾವಿರ ಮತ್ತು ತೃತೀಯ ರೂ. ೫ ಸಾವಿರ, ಜಿಲ್ಲಾಮಟ್ಟ ಪ್ರಥಮ ರೂ. ೩೦ ಸಾವಿರ, ದ್ವಿತೀಯ ರೂ. ೨೫ ಸಾವಿರ ಮತ್ತು ತೃತೀಯ ರೂ. ೨೦ ಸಾವಿರ, ರಾಜ್ಯಮಟ್ಟದಲ್ಲಿ ಪ್ರಥಮ ರೂ. ೫೦ ಸಾವಿರ, ದ್ವಿತೀಯ ರೂ. ೪೦ ಸಾವಿರ ಮತ್ತು ತೃತೀಯ ರೂ. ೩೫ ಸಾವಿರ ಬಹುಮಾನ ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛೆಯುಳ್ಳ ರೈತ/ ರೈತ ಮಹಿಳೆಯರು ಸಂಬAಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ. ಷೇಕ್ ತಿಳಿಸಿದ್ದಾರೆ.
ಕೃಷಿ ಪಂಡಿತ ಪ್ರಶಸ್ತಿಗೆ
ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ‘ಕೃಷಿ ಪಂಡಿತ’ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವ ರೈತರ ಸಂಶೋಧನೆ/ ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಈ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತ/ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ತಾ. ೨೨ ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಪ್ರಥಮ ರೂ. ೧.೨೫ ಲಕ್ಷ, ದ್ವಿತೀಯ ರೂ. ೧ ಲಕ್ಷ, ತೃತೀಯ ರೂ. ೭೫ ಸಾವಿರ ಮತ್ತು ಕೃಷಿ ಪಂಡಿತ ಉದಯೋನ್ಮುಕರಿಗೆ ರೂ. ೫೦ ಸಾವಿರ ಬಹುಮಾನ ನೀಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.