ಚೆಟ್ಟಳ್ಳಿ, ಜು. ೯: ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್.ಎಸ್.ಯು.ಐ) ಇದರ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗು ಜಿಲ್ಲೆಯ ಅಯ್ಯಂಗೇರಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಕೊಡಗು ಜಿಲ್ಲಾ ಮಾಜಿ ಎನ್.ಎಸ್.ಯು.ಐ ಉಪಾಧ್ಯಕ್ಷ ಅಬ್ದುಲ್ ರಾಶಿದ್ ಪಿ.ಎಂ. ಆಯ್ಕೆಗೊಂಡಿದ್ದಾರೆ.