ಉದಯಪುರ ಟೈಲರ್ ಹತ್ಯೆ ಪ್ರಕರಣ: ಏಳನೇ ಆರೋಪಿಯನ್ನು ಬಂಧಿಸಿದ ಎನ್‌ಐಎ

ನವದೆಹಲಿ, ಜು. ೧೦: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ರಾಷ್ಟಿçÃಯ ತನಿಖಾ ಸಂಸ್ಥೆ (ಎನ್‌ಐಎ) ೭ನೇ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಫರ್ಹಾದ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ. ಶನಿವಾರ ಸಂಜೆ ಶೇಖ್ ಅಲಿಯಾಸ್ ಬಬ್ಲಾನನ್ನು ಬಂಧಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಆತ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರಿಯಾಜ್ ಅಖ್ತಾರಿಯಾ ಆಪ್ತರಾಗಿದ್ದು, ಟೈಲರ್ ಹತ್ಯೆ ಪಿತೂರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಎಂದು ಹೇಳಿದ್ದಾರೆ. ಕಳೆದ ಜೂನ್ ೨೮ ರಂದು ಟೈಲರ್ ಕನ್ಹಯ್ಯಾ ಲಾಲ್ ಬಳಿ ಬಟ್ಟೆ ಹೊಲಿಯಲು ಅಳತೆ ಕೊಡುವ ನೆಪದಲ್ಲಿ ಬಂದು ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿ ಚಾಕುವಿನಿಂದ ಶಿರಚ್ಛೇದ ಮಾಡಿದ ಕ್ರೂರ ದಾಳಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಆಗಿದ್ದು, ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಂಡಿದ್ದೇವೆ ಎಂದು ಆರೋಪಿಗಳು ಹೇಳಿದ್ದರು.

ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಕೋಟ್ಯಂತರ ನಗದು ಪತ್ತೆ

ಕೊಲಂಬೋ, ಜು. ೧೦: ಶ್ರೀಲಂಕಾದಲ್ಲಿ ಪಲಾಯನ ಮಾಡಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ನಗದು ಹಣ ಸಿಕ್ಕಿರುವುದಾಗಿ ಸರ್ಕಾರ ವಿರೋಧಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ಈ ಕುರಿತ ವೀಡಿಯೋ ಕೂಡ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇಡೀ ದೇಶ ಆರ್ಥಿಕ ಸಂಕಷ್ಟದಿAದ ಬಳಲುತ್ತಿದ್ದರೆ ಲಂಕಾ ಅಧ್ಯಕ್ಷರು ಮಾತ್ರ ಕೋಟ್ಯಂತರ ಹಣವನ್ನು ಬಂಗಲೆಯಲ್ಲಿ ಹುದುಗಿಸಿಟ್ಟಿದ್ದರೇ ಎಂಬ ಪ್ರಶ್ನೆ ಕೂಡ ಮೂಡುತ್ತಿದೆ. ಇದಕ್ಕೆ ಇಂಬು ನೀಡುವಂತೆ ಈ ಹಿಂದೆ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸದ ಮೇಲೆ ದಾಳಿ ನಡೆಸಿದ್ದ ಪ್ರತಿಭಟನಾಕಾರರು ಬಂಗಲೆಯಲ್ಲಿ ಕೋಟ್ಯಾಂತರ ಹಣ ದೊರೆತಿದೆ ಎಂದು ಹೇಳಿಕೊಂಡಿದ್ದಾರೆ. ಗೊಟಬಯ ಅವರ ಐಷಾರಾಮಿ ನಿವಾಸದ ಸುತ್ತಲೂ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತು ಒಳಗೆ ನುಗ್ಗಿದ್ದ ಪ್ರತಿಭಟನಾಕಾರರು, ಅಲ್ಲಿ ಮೋಜು ಮಸ್ತಿ ಮಾಡಿದ್ದರು. ಶನಿವಾರ ರಾತ್ರಿಯನ್ನು ಅನೇಕರು ಅಲ್ಲಿಯೇ ಕಳೆದಿದ್ದರು. ಈಜುಕೊಳದಲ್ಲಿ ಈಜಾಡಿ ಮಜಾ ಮಾಡಿದ್ದರು. ಇನ್ನು ಅನೇಕರು ಅಡುಗೆ ಮನೆಗೆ ನುಗ್ಗಿ ಅಲ್ಲಿ ಅಡುಗೆ ಮಾಡಿ ತಿಂದಿದ್ದರು. ಇನ್ನು ಕೆಲವರು ನಿವಾಸದಲ್ಲಿ ಗುಪ್ತವಾಗಿ ಇರಿಸಿದ್ದ ದೊಡ್ಡ ದೊಡ್ಡ ನೋಟಿನ ಕಂತೆಗಳನ್ನು ಹುಡುಕಿ ಹೊರತೆಗೆದಿದ್ದಾರೆ. ಪ್ರತಿಭಟನಾಕಾರರು ಅದನ್ನು ಎಣಿಸುವುದು ವೀಡಿಯೋಗಳಲ್ಲಿ ದಾಖಲಾಗಿದೆ. ಆದರೆ, ಹೀಗೆ ದೊರೆತ ಹಣವನ್ನು ತಾವೇ ಕೊಂಡೊಯ್ಯುವುದಿಲ್ಲ. ಬದಲಾಗಿ ಭದ್ರತಾ ಘಟಕಗಳಿಗೆ ಒಪ್ಪಿಸಿರುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪರಿಶೀಲನೆ ಮಾಡಿದ ಬಳಿಕ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಶ್ರೀಲಂಕಾ ಜನರೊಂದಿಗೆ ಭಾರತ ಇದೆ: ವಿದೇಶಾಂಗ ಸಚಿವಾಲಯ

ನವದೆಹಲಿ, ಜು. ೧೦: ಶ್ರೀಲಂಕಾದಲ್ಲಿನ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ ಹಾಗೂ ಬಿಕ್ಕಟನ್ನು ಎದುರಿಸುತ್ತಿರುವ ಅಲ್ಲಿನ ಜನರೊಂದಿಗೆ ಭಾರತ ಇದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಈ ಸಂಬAಧ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೊರಡಿಸಿದ ಪ್ರಕಟಣೆಯಲ್ಲಿ, ಶ್ರೀಲಂಕಾ ಭಾರತದ ಅತ್ಯಂತ ನಿಕಟ ನೆರೆಯ ರಾಷ್ಟ್ರವಾಗಿದೆ. ಎರಡೂ ದೇಶಗಳ ನಾಗರಿಕರು ಗಾಢವಾದ ಸಾಂಸ್ಕೃತಿಕ ಸಂಬAಧಗಳನ್ನು ಹೊಂದಿದ್ದಾರೆ. ಶ್ರೀಲಂಕಾದ ಜನರು ಈ ಕಷ್ಟದ ಸಮಯದಿಂದ ಹೊರಬರಲು ಪ್ರಯತ್ನಿಸುತ್ತಿರುವಾಗ ನಾವು ಅವರೊಂದಿಗೆ ನಿಲ್ಲುತ್ತೇವೆ ಎಂದು ತಿಳಿಸಿದೆ. ನಮ್ಮ ‘ನೆರೆಹೊರೆ ಮೊದಲು’ ನೀತಿಯಲ್ಲಿ ಶ್ರೀಲಂಕಾ ಅತ್ಯಂತ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಅದಕ್ಕಾಗಿಯೇ ಈ ಗಂಭೀರ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು $೩.೮ ಶತಕೋಟಿಗಿಂತ ಹೆಚ್ಚಿನ ಸಹಾಯವನ್ನು ಶ್ರೀಲಂಕಾಕ್ಕೆ ನೀಡಿದ್ದೇವೆ ಎಂದು ಹೇಳಿದೆ. ಶ್ರೀಲಂಕಾದಲ್ಲಿನ ಇತ್ತೀಚಿನ ಬದಲಾವಣೆಗಳನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ. ನಿರ್ದಿಷ್ಟ ಸಾಂವಿಧಾನಿಕ ಚೌಕಟ್ಟಿನೊಳಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಸಹಾಯದಿಂದ ಸಮೃದ್ಧಿ ಮತ್ತು ಅಭಿವೃದ್ಧಿಯನ್ನು ಸಾಧಿಸಲು ಬಯಸುತ್ತಿರುವ ಶ್ರೀಲಂಕಾದ ಜನರೊಂದಿಗೆ ಭಾರತವು ಈ ಕಷ್ಟದ ಸಮಯದಲ್ಲಿ ಅವರೊಂದಿಗಿರುತ್ತದೆ ಎಂದು ಭಾರತ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿಗೆ ಆಗಮಿಸಿದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು, ಜು. ೧೦: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ರಾಷ್ಟçಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ್ರೌಪದಿ ಮುರ್ಮು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಾಭಿವೃದ್ಧಿ ಸಚಿವ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿರೋಧ ಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು, ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಬೆಂಬಲಿಸುವAತೆ ಮನವಿ ಮಾಡಿದ್ದರು. ರಾಷ್ಟçಪತಿ ಹುದ್ದೆಗೆ ತಾ. ೧೮ ರಂದು ಚುನಾವಣೆ ನಡೆಯಲಿದ್ದು, ತಾ. ೨೧ ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ತಮ್ಮನ್ನು ಬೆಂಬಲಿಸುವAತೆ ಕೋರಿ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಲ್ಲಿ ಮನವಿ ಮಾಡಲು ಬೆಂಗಳೂರಿಗೆ ಭೇಟಿ ನೀಡಿದ್ದರು.

ಉಕ್ರೇನ್ ಅಪಾರ್ಟ್ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ: ೧೫ ಸಾವು

ಕೈವ್, ಜು. ೧೦: ಪೂರ್ವ ಉಕ್ರೇನ್ ನಗರವಾದ ಚಾಸಿನ್‌ಯಾರ್‌ನಲ್ಲಿರುವ ಅಪಾರ್ಟ್ಮೆಂಟ್ ಬ್ಲಾಕ್‌ನ ಮೇಲೆ ರಷ್ಯಾದ ಸೇನೆ ರಾಕೆಟ್ ಹಾರಿಸಿದೆ. ಇದರಿಂದಾಗಿ ಕನಿಷ್ಟ ೧೫ ಜನರು ದುರ್ಮರಣಕ್ಕೀಡಾಗಿದ್ದಾರೆ. ದಾಳಿಯ ನಂತರ ೨೦ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದರು. ಕೇವಲ ಐವರನ್ನು ಮಾತ್ರ ಅವಶೇಷಗಳಿಂದ ಸುರಕ್ಷಿತವಾಗಿ ಹೊರತೆಗೆಯಲು ಸಾಧ್ಯವಾಗಿದೆ ಎಂದು ಉಕ್ರೇನಿಯನ್ ತುರ್ತು ಸೇವೆಗಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಐದು ಅಂತಸ್ತಿನ ಕಟ್ಟಡದ ಒಂದು ಭಾಗಕ್ಕೆ ರಾಕೆಟ್ ಅಪ್ಪಳಿಸಿದ್ದು, ಚಾಸಿವ್ ಯಾರ್ ಕ್ರಾಮಟೋಸ್ಕ್ ನಗರದ ಸಮೀಪವಿರುವ ಡೊನೆಟ್ಸ್ಕ್ ಪ್ರದೇಶದಲ್ಲಿದೆ. ಪ್ರಾದೇಶಿಕ ಗವರ್ನರ್ ಪಾವ್ಲೋ ಕಿರಿಲೆಂಕೊ ರಷ್ಯಾದ ಉರಾಗಾನ್ ರಾಕೆಟ್‌ಗಳಿಂದ ಈ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.