ಭಾಗಮಂಡಲ: ಭಾಗಮಂಡಲದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಧಾರಾಕಾರ ಸುರಿಯುತ್ತಿರುವ ಮಳೆಯ ನಡುವೆ ಭಾಗಮಂಡಲ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಭಾಗಮಂಡಲ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನೆಲ್ಲಿ, ಸೀಬೆ, ನೇರಳೆ, ಸಿಂಗಾಪುರ್ ಚೆರಿ, ಬಾದಾಮಿ ಗಿಡಗಳನ್ನು ನೆಡಲಾಯಿತು. ಅವುಗಳನ್ನು ಪೋಷಿಸುವಂತೆ ವಲಯ ಅರಣ್ಯ ಅಧಿಕಾರಿ ಕೆ. ಕೊಟ್ರೇಶ್ ತಿಳಿಸಿದರು. ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಭಾಗಮಂಡಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ಭಾಗಮಂಡಲ ಪ್ರಾದೇಶಿಕ ವಲಯದ ಉಪವಲಯ ಅಧಿಕಾರಿ ಮಂಜುನಾಥ್ ನಾಯಕ್ ಹಾಗೂ ಸಿಬ್ಬಂದಿಗಳು ತಲಕಾವೇರಿ ವನ್ಯಜೀವಿ ವಲಯದ ಸಿಬ್ಬಂದಿಗಳು ಭಾಗಮಂಡಲ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್, ಶಾಲೆಯ ಸಹ ಶಿಕ್ಷಕಿ ಬಿ.ಪಿ. ಅರುಣಾ, ಎನ್. ವೀಣಾ, ಅಡುಗೆ ಸಿಬ್ಬಂದಿ ಶೈಲಜಾ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.ಚೆಟ್ಟಳ್ಳಿ: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೋವರ್ಸ್ ಮತ್ತು ರೇಂಜರ್ಸ್ ಘಟಕ, ರಾಷ್ಟಿçÃಯ ಸೇವಾ ಯೋಜನೆ ಹಾಗೂ ಅರಣ್ಯ ಇಲಾಖೆ ವೀರಾಜಪೇಟೆ ಇವರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿ ದೇವಯ್ಯ, ಪಾಂಶುಪಾಲ ಡಾ. ದಯಾನಂದ, ರೋವರ್ಸ್ ಮತ್ತು ರೇಂಜರ್ ಅಧಿಕಾರಿ ವನಿತ್ಕುಮಾರ್ ಎಂ.ಎನ್., ರಾಖಿ ಪೂವಣ್ಣ, ಎನ್.ಎಸ್.ಎಸ್. ಅಧಿಕಾರಿ ದಿವ್ಯ ಎಂ.ಬಿ. ಮತ್ತು ರಘುರಾಜ್, ಉಪನ್ಯಾಸಕ ವೃಂದ, ಆಡಳಿತ ವರ್ಗದವರು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.ಕೂಡಿಗೆ: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹೆಬ್ಬಾಲೆ ಉಪವಲಯ ಅರಣ್ಯ ಇಲಾಖೆಯ ವತಿಯಿಂದ ನೂರಾರು ಸಸಿಗಳನ್ನು ನೆಡುವ ಮೂಲಕ ವನ ಮಹೋತ್ಸವವನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅನಂತ್, ಚಂದ್ರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿರೂಪಾಕ್ಷ, ಹೆಬ್ಬಾಲೆ ಉಪ ವಲಯ ಅರಣ್ಯಾಧಿಕಾರಿ ಎಂ.ಕೆ. ಭರತ್, ಅರಣ್ಯ ರಕ್ಷಕ ಲೋಕೇಶ್, ವೀಕ್ಷಕರಾದ ರಾಜಪ್ಪ, ವರಣ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.ವೀರಾಜಪೇಟೆ: ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ವೀರಾಜಪೇಟೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಣೆ ಮಾಡಲಾಯಿತು.
ಈ ಸಂದರ್ಭ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ಶ್ರೀನಿವಾಸ್, ಉಪ ಆಡಳಿತಾಧಿಕಾರಿ ಕಾಂತರಾಜ್, ಅರಣ್ಯ ವಲಯಾಧಿಕಾರಿ ರೋಷಿಣಿ, ಡಾ. ಗಿರಿಧರ್, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಮಡಿಕೇರಿ: ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತದ ಮಡಿಕೇರಿ ಅರಣ್ಯ ವಿಭಾಗ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ಗಾಳಿಬೀಡು ನವೋದಯ ವಿದ್ಯಾಲಯದ ಆವರಣದಲ್ಲಿ ಜಿಲ್ಲಾ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಶ್ರಯದಲ್ಲಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ಎಸ್. ಯಾದವ್ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಜಿ.ಎಸ್. ಯಾದವ್, ಶಾಲಾ-ಕಾಲೇಜು ಆವರಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡನೆಟ್ಟು ಬೆಳೆಸಲು ಪ್ರತಿಯೊಬ್ಬರೂ ಅರಣ್ಯ ಇಲಾಖೆಯೊಂದಿಗೆ ಅರಣ್ಯ ಸಂರಕ್ಷಣೆಗೆ ಕೈಜೋಡಿಸಬೇಕು ಎಂದರು.
ಕೊಡಗು ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್. ನಿರಂಜನ ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಪ್ರದೇಶ ವೃದ್ಧಿಸುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಡಿಸಿಎಫ್ಗಳಾದ ಎ.ಟಿ. ಪೂವಯ್ಯ, ಶಿವರಾಮ್ ಬಾಬು, ಪೂರ್ಣಿಮಾ, ಶಾಲೆಯ ಪ್ರಾಂಶುಪಾಲ ಪಂಕಜಾಕ್ಷನ್, ಎಸಿಎಫ್ಗಳಾದ ಎಂ.ಎಸ್. ಚಂಗಪ್ಪ, ಮೋಹಿಸಿನ್ ಬಾಷಾ, ಆರ್ಎಫ್ಓಗಳಾದ ಮಯೂರ್ ಕಾರವೇಕರ, ಟಿ.ಎಂ. ರವೀಂದ್ರ, ಮಧುಸೂದನ್, ಡಿಆರ್ಎಫ್ಓಗಳಾದ ದರ್ಶಿನಿ, ಬಾಬು ರಾಥೋಡ್, ಫಿರೋಜ್ ಖಾನ್, ಮಲ್ಲಯ್ಯ ಹಿರೇಮಠ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.