ಮಡಿಕೇರಿ, ಜು. ೧೧: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾ. ೧೨ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಮಧ್ಯಾಹ್ನ ೧ ಗಂಟೆಗೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ. ಚನ್ನಬಸವೇಶ ತಿಳಿಸಿದ್ದಾರೆ.

*ಕಂದಾಯ ಸಚಿವರಾದ ಆರ್.ಅಶೋಕ ಅವರು ತಾ. ೧೨ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಧ್ಯಾಹ್ನ ೧ ಗಂಟೆಗೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಕಂದಾಯ ಸಚಿವರ ಆಪ್ತ ಕಾರ್ಯದರ್ಶಿ ಡಾ. ಆರ್. ಪ್ರಶಾಂತ್ ತಿಳಿಸಿದ್ದಾರೆ.

* ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಕ್ಕೆ ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ತಾ. ೧೨ರಂದು (ಇಂದು) ಬೆಳಿಗ್ಗೆ ೯.೩೦ಕ್ಕೆ ವಿವಿಧ ಹಾನಿ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿರುವ ಸಚಿವರು, ಮಧ್ಯಾಹ್ನ ೧೨.೧೫ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ. ವಿರೂಪಾಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.