ಕುಶಾಲನಗರ, ಜು.೧೧: ಕಾವೇರಿ ನದಿ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಯೋಜನೆಗೆ ಸಂಬAಧಿಸಿದ ಇಲಾಖೆಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮೂಲಕ ಕುಶಾಲನಗರ ವ್ಯಾಪ್ತಿಯ ನದಿ ತಟದ ಪ್ರದೇಶವನ್ನು ಪ್ರವಾಹ ಮುಕ್ತವಾಗಿಸಲು ಪೂರ್ವ ಸಿದ್ಧತೆಗಳು ನಡೆದಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಕುಶಾಲನಗರ ಸಮೀಪದ ಹಾರಂಗಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದರು. ನದಿ ಪ್ರವಾಹ ಮತ್ತು ಪ್ರಕೃತಿ ವಿಕೋಪದ ಬಗ್ಗೆ ಜಿಲ್ಲೆಯ ಇಬ್ಬರು ಶಾಸಕರೊಂದಿಗೆ ಚರ್ಚಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಹಾರಂಗಿ ಮತ್ತು ಕಾವೇರಿ ನದಿ ನೀರಿನ ಪ್ರವಾಹದಿಂದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿದ್ದು, ಶಾಶ್ವತ ಪರಿಹಾರ ದೊರಕಲಿದೆ ಎಂದರು.
ಹಾರAಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ಜನರ ಜೀವನ ಅಸ್ತವ್ಯಸ್ತಗೊಳ್ಳುವಂತಾಗಿದೆ.ಯಾವುದೇ ಅನಾಹುತ ಉಂಟಾಗದAತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಸರ್ಕಾರ ನಿರಂತರ ಸಂಪರ್ಕ ಇಟ್ಟುಕೊಂಡಿದೆ ಎಂದರು.
(ಮೊದಲ ಪುಟದಿಂದ) ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟದ ಅಂತರ ಇಟ್ಟುಕೊಂಡು ನದಿಗೆ ನೀರು ಹರಿಸುವ ಸಂದರ್ಭ ತಗ್ಗು ಪ್ರದೇಶಗಳು ಜಲಾವೃತಗೊಳ್ಳದಂತೆ ಇದುವರೆಗೆ ಎಚ್ಚರ ವಹಿಸಲಾಗಿದೆ. ನದಿ ಹೂಳೆತ್ತುವ ಕಾಮಗಾರಿಯಿಂದ ಪ್ರವಾಹ ನಿಯಂತ್ರಣ ಸಾಧ್ಯವಾಗಿದೆ ಎಂದ ಸಚಿವರು, ಪಟ್ಟಣ ವ್ಯಾಪ್ತಿಯಲ್ಲಿ ಸೇರಿದಂತೆ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕಾವೇರಿ ನದಿಯ ನಿರ್ವಹಣೆ ಕಾಮಗಾರಿ ನಿರಂತರ ನಡೆಯಲಿದೆ ಎಂದರು.
ಹಾರAಗಿ ಜಲಾಶಯದಿಂದ ನೀರಿನ ಸಂಗ್ರಹದಿAದ ಹಿನ್ನೀರು ಪ್ರದೇಶಗಳು ಮುಳುಗಡೆ ಆಗುತ್ತಿರುವುದು, ಮತ್ತು ನದಿಯಿಂದ ನೀರು ಹರಿಯುವ ಸಂದರ್ಭ ಕಾವೇರಿ ನದಿ ಪಾತ್ರದ ನಿವಾಸಿಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ನಿವಾರಿಸಲು ಮುಂದಿನ ಯೋಜನೆಗಳು ಸಹಕಾರಿಯಾಗಲಿವೆ ಎಂದರು.
ಜಿಲ್ಲೆಯಲ್ಲಿ ಅತಿವೃಷ್ಟಿಗೆ ಮನೆ ಕಳೆದುಕೊಂಡ ಸಂತ್ರಸ್ಥರಿಗೆ ಮನೆ ಕಟ್ಟುವ ಹಿನ್ನೆಲೆಯಲ್ಲಿ ೫ ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ರೂ.೧ ಲಕ್ಷ, ತದನಂತರ ಕಟ್ಟಡ ನಿರ್ಮಾಣದ ಹಂತ ಹಂತಗಳಲ್ಲಿ ಉಳಿದ ಹಣ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭ ಸಚಿವರೊಂದಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ, ಡಾ.ಬಿ.ಸಿ. ಸತೀಶ, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಪೊಲೀಸ್ ವರಿಷ್ಟಾಧಿಕಾರಿ ಎಂ.ಎ. ಅಯ್ಯಪ್ಪ, ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಚೆನ್ನಕೇಶವ, ತಾಲೂಕು ತಹಶೀಲ್ದಾರ್ ಪ್ರಕಾಶ್ ಮತ್ತಿತ್ತರ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.