ಪೊನ್ನಂಪೇಟೆ, ಜು. ೧೧: ದಕ್ಷಿಣ ಕೊಡಗಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಸಮೀಪದ ಪ್ರಸಿದ್ಧ ಇರ್ಪು ಜಲಪಾತ ಬೋರ್ಗರೆಯುತ್ತಾ ಧುಮ್ಮಿಕ್ಕುತ್ತಿದೆ.

ಮಳೆಯ ನಡುವೆ ಈ ಜಲಪಾತ ವೀಕ್ಷಣೆಗೆ ಪ್ರತಿದಿನ ನೂರಾರು ಜನರು ಆಗಮಿಸುತ್ತಿದ್ದಾರೆ. ಆದರೆ ಈ ವ್ಯಾಪಿಯಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆಯಾಗುತ್ತಿರುವ ಪರಿಣಾಮ ಸಾರ್ವಜನಿಕರ ಸುರಕ್ಷತೆಯ ಕಾರಣದಿಂದ ಸದ್ಯಕ್ಕೆ ತಾಲೂಕು ಆಡಳಿತದ ವತಿಯಿಂದ ಸಾರ್ವಜನಿಕರಿಗೆ ಜಲಪಾತ ವೀಕ್ಷಣೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ವಿವಿಧ ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರು ನಿರಾಸೆಯಿಂದ ವಾಪಾಸು ತೆರಳುತ್ತಿದ್ದಾರೆ.

ಚಿತ್ರ ವರದಿ -ಚನ್ನನಾಯಕ