ಮಡಿಕೇರಿ, ಜು. ೧೧: ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಸ್ವಾಭಿಮಾನಿ ಎಸ್‌ಸಿ-ಎಸ್‌ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

ಬಹುಜನ ಸಮಾಜ ಪಕ್ಷ ಮತ್ತು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು, ಪದಾಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಆಯೋಗವು ನೀಡಿರುವ ಮಡಿಕೇರಿ, ಜು. ೧೧: ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಸ್ವಾಭಿಮಾನಿ ಎಸ್‌ಸಿ-ಎಸ್‌ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

ಬಹುಜನ ಸಮಾಜ ಪಕ್ಷ ಮತ್ತು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು, ಪದಾಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಆಯೋಗವು ನೀಡಿರುವ ಸಂಘದ ಅಧ್ಯಕ್ಷ ಕೆ.ಎನ್. ಅಶೋಕ್ ಮಾತನಾಡಿ, ಇಂದು ರಾಜ್ಯದಲ್ಲಿ ಪರಿಶಿಷ್ಠ ಜಾತಿಯವರು ೧೭.೧೫ ರಷ್ಟು ಮತ್ತು ಪರಿಶಿಷ್ಟ ಪಂಗಡದವರು ಸುಮಾರು ಶೇ೭ರಷ್ಟು ಹೆಚ್ಚಾಗಿರುತ್ತಾರೆ. ಆದರೆ, ಮೀಸಲಾತಿ ಪ್ರಮಾಣ ಮಾತ್ರ ಅದೇ ರೀತಿ ಮುಂದುವರೆಯುತ್ತಿದೆ. ಇದರಿಂದ ಪ.ಜಾ ಮತ್ತು ಪ.ಪಂ ಸಮುದಾಯದವರಿಗೆ ಅನ್ಯಾಯ ವಾಗಿದೆ. ಆದ್ದರಿಂದ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ೭.೫ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾಧ್ಯಕ್ಷ ಎಚ್.ಆರ್. ಶಿವಣ್ಣ ಮಾತನಾಡಿ, ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ ಕಾಡುತ್ತದೆ. ಪರಿಣಾಮ ಸರ್ಕಾರ ಬಿಪಿಎಲ್ ಕಾರ್ಡ್ದಾರರಿಗೆ ೩ ಲೀಟರ್ ಸೀಮೆ ಎಣ್ಣೆ ವಿತರಿಸಬೇಕು. ಜತೆಗೆ, ವಿದ್ಯುತ್ ತಂತಿಗಳಿಗೆ ಅಡ್ಡಲಾಗಿ ಬೆಳೆದ ಮರದ ರೆಂಬೆಗಳನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಉಸ್ತುವಾರಿ ಜಯಪ್ಪ ಹಾನಗಲ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಪಾಧ್ಯಕ್ಷ ಎಚ್.ಜಿ. ಗೋಪಾಲ್, ತಾಲೂಕು ಸಂಚಾಲಕ ಲವ, ಪ್ರಮುಖರಾದ ಮೋಹನ್, ನಾಣಯ್ಯ, ಪಾಲಾಕ್ಷ, ಎಚ್.ಎಲ್. ದಿವಾಕರ್, ಕೆ.ಬಿ. ರಾಜು, ಮಹಾದೇವ ಹಾಗೂ ೧೦ಕ್ಕೂ ಹೆಚ್ಚಿನ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಪದಾಧಿಕಾರಿಗಳಿದ್ದರು.