ಸೋಮವಾರಪೇಟೆ, ಜು.೧೧: ಇಂದಿನ ವಿದ್ಯಾರ್ಥಿ ಸಮೂಹವೇ ಭವಿಷ್ಯದ ಕನ್ನಡ ಕಾವಲುಗಾರರು. ಯುವ ಜನಾಂಗ ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರಪಂಚ ಪ್ರವೇಶಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕನ್ನಡ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ-ಕನ್ನಡ ಜಾಗೃತಿ ಸಮಿತಿ, ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತದ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕನ್ನಡ ಕಾಯಕ ವರ್ಷಾಚರಣೆ ಸಮಾರೋಪ ಮತ್ತು ನುಡಿ-ನಡೆ- ನುಡಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಸುಂದರ ಹಾಗೂ ವೈಜ್ಞಾನಿಕ ಭಾಷೆ, ನುಡಿದಂತೆ ಬರವಣಿಗೆಯೂ ಇರುವ ವಿಶಿಷ್ಟ ಭಾಷೆ. ಸಾರಸ್ವತ ಲೋಕದಲ್ಲಿ ವಿಶೇಷ ಛಾಪು ಮೂಡಿಸಿರುವ ಕನ್ನಡ ಭಾಷೆಯು ಬಳಕೆಯಿಂದ ಮಾತ್ರ ಉಳಿಯಲು ಸಾಧ್ಯ. ಕನ್ನಡಿಗರ ಒಟ್ಟಾರೆ ಆಶಯವನ್ನು ಈಡೇರಿಸುವ ಸಂಕಲ್ಪವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರ ಹೊಂದಿದೆ ಎಂದರು.
ವೃತ್ತಿಯೊAದಿಗೆ ಪ್ರವೃತ್ತಿ ಮುಖ್ಯ. ಸಮಾಜವನ್ನು ಕಟ್ಟುವ ಪ್ರವೃತ್ತಿಯನ್ನು ಎಲ್ಲರೂ ಹೊಂದಿರಬೇಕು. ಕನ್ನಡ ಭಾಷೆಯನ್ನು ಬೆಳೆಸಲು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕನ್ನಡ ನಮ್ಮದು ಎಂಬ ಅಹಂ ಎಲ್ಲಾ ಕನ್ನಡಿಗರಲ್ಲೂ ಇರಬೇಕು ಎಂದು ಟಿ.ಎಸ್. ನಾಗಾಭರಣ ಹೇಳಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಕನ್ನಡವು ಹೆಚ್ಚು ಪದಗಳನ್ನು ಹೊಂದಿರುವ ಭಾಷೆಯಾಗಿದೆ. ನಾಡಗೀತೆಯಲ್ಲಿ ಕನ್ನಡ ನಾಡಿನ ವರ್ಣನೆ ಅದ್ಬುತವಾಗಿದೆ. ಎಲ್ಲರಿಗೂ ಭಾಷೆಯ ಮೇಲೆ ಅಭಿಮಾನವಿರಬೇಕು. ಕನ್ನಡ ನಾಡಿನ
(ಮೊದಲ ಪುಟದಿಂದ) ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು ಕನ್ನಡ ಮಾಯವಾಗು ತ್ತಿರುವುದು ಆತಂಕಕಾರಿ ಎಂದರು.
ಕನ್ನಡ ನಾಡು ನುಡಿ, ಸಾಹಿತ್ಯದ ಜಾಗೃತಿ ಹಾಗೂ ರಕ್ಷಣೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ ಶ್ರಮಿಸುತ್ತಿದ್ದು, ಇನ್ನಷ್ಟು ಕ್ರಿಯಾಶೀಲವಾಗಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳು ನಡೆಯಬೇಕೆಂದು ಆಶಿಸಿದರು.
ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್. ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ತಾಲೂಕು ತಹಶಿಲ್ದಾರ್ ಆರ್. ಗೋವಿಂದರಾಜು, ಜಿಲ್ಲಾ ಕಸಾಪ ಅಧ್ಯಕ್ಷ ಕೇಶವ ಕಾಮತ್, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಬೇಳೂರು ಗ್ರಾ.ಪಂ. ಅಧ್ಯಕ್ಷ ಬಿ.ಎಂ. ಪ್ರಶಾಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಶಿಕ್ಷಕರ ಸಂಘದ ಅಧ್ಯಕ್ಷರುಗಳಾದ ಮಂಜುನಾಥ್, ಬಸವರಾಜು, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಾಲಚಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸನ್ಮಾನ
ಕನ್ನಡ ಕಾಯಕ ವರ್ಷಾಚರಣೆ ಹಿನ್ನೆಲೆ ಕನ್ನಡ ನಾಡು ನುಡಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಕಾರ್ಯದರ್ಶಿ ಸಂತೋಷ ಹಾನಗಲ್ಲ, ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಾಲಚಂದ್ರ, ತಾಲೂಕು ತಹಶಿಲ್ದಾರ್ ಗೋವಿಂದರಾಜು ಅವರುಗಳನ್ನು ಕನ್ನಡ ಜಾಗೃತಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.